ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ | ಕಣ್ಣೂರು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

Published 1 ಜೂನ್ 2023, 5:21 IST
Last Updated 1 ಜೂನ್ 2023, 5:21 IST
ಅಕ್ಷರ ಗಾತ್ರ

ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಲುಗಡೆಗೊಂಡಿದ್ದ ಅಲಪ್ಪುವ–ಕಣ್ಣೂರು ಎಕ್ಸ್‌ಪ್ರೆಸ್ ರೈಲಿನ ಕೋಚ್‌ ಗುರುವಾರ ನಸುಕಿನಲ್ಲಿ ಬೆಂಕಿಗಾಹುತಿಯಾಗಿದೆ.

ಪ್ರಯಾಣಿಕರೆಲ್ಲರೂ ಇಳಿದು ಹೋದ ನಂತರ ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವು ಮೀಟರ್ ದೂರದಲ್ಲಿ ರೈಲು ನಿಂತಿತ್ತು. ಆಗ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

ಆದರೆ, ಇದು ಉದ್ದೇಶಪೂರ್ವಕ ಕೃತ್ಯವೇ ಅಥವಾ ವಿದ್ಯುತ್ ದೋಷವೇ ಬೆಂಕಿಗೆ ಕಾರಣವೇ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.

‘ಘಟನೆಯ ಬಗ್ಗೆ ನಮಗೆ ಮುಂಜಾನೆ 1.30ರ ಸುಮಾರಿಗೆ ಮಾಹಿತಿ ಸಿಕ್ಕಿತು. ಸ್ಥಳಕ್ಕೆ ತೆರಳಿದಾಗ ಒಂದು ಕೋಚ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಬೆಂಕಿ ನಂದಿಸುವ ಕಾರ್ಯಕ್ಕೆ ನಾಲ್ಕು ಅಗ್ನಿಶಾಮಕ ಹಾಹನಗಳನ್ನು ನಿಯೋಜಿಸಲಾಗಿತ್ತು. ಬೆಳಗಿನ ಜಾವ 3.15 ರ ಸುಮಾರಿಗೆ ಬೆಂಕಿಯನ್ನು ನಂದಿಸಲಾಯಿತು. ರೈಲಿನ ಹಿಂಬದಿಯ ಮೂರನೇ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ವಿಧಿವಿಜ್ಞಾನ ತನಿಖೆಯಿಂದ ಘಟನೆಗೆ ಕಾರಣ ಏನೆಂದು ನಿರ್ಧರಿಸಲಾಗುವುದು’ ಎಂದು ಕಣ್ಣೂರು ಅಗ್ನಿಶಾಮಕ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಪ್ರಿಲ್ 2 ರಂದು ರಾತ್ರಿ ಕೋಯಿಕ್ಕೋಡ್ ಜಿಲ್ಲೆಯಲ್ಲಿ ದುಷ್ಕರ್ಮಿಯೊಬ್ಬ ಅಲಪ್ಪುವ-ಕಣ್ಣೂರು ಎಕ್ಸಿಕ್ಯುಟಿವ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ್ದ. ಘಟನೆಯಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟರೆ, ಒಂಬತ್ತು ಜನರಿಗೆ ಸುಟ್ಟ ಗಾಯಗಳಾಗಿತ್ತು. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT