ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಚಿಂಗ್‌ ಸೆಂಟರ್‌ ದುರಂತ: ಬಂಧಿತರು 14 ದಿನ ನ್ಯಾಯಾಂಗ ವಶಕ್ಕೆ

Published : 4 ಸೆಪ್ಟೆಂಬರ್ 2024, 14:23 IST
Last Updated : 4 ಸೆಪ್ಟೆಂಬರ್ 2024, 14:23 IST
ಫಾಲೋ ಮಾಡಿ
Comments

ನವದೆಹಲಿ: ನಾಗರಿಕ ಸೇವಾ ಪರೀಕ್ಷೆಯ ಮೂವರು ಆಕಾಂಕ್ಷಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಆರು ಮಂದಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೆಹಲಿಯ ಹಳೆಯ ರಾಜಿಂದರ್‌ ನಗರದ ತರಬೇತಿ ಕೇಂದ್ರದ ನೆಲಮಾಳಿಗೆಯಲ್ಲಿ ತುಂಬಿದ್ದ ಮಳೆ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದರು. ಈ ಸಂಬಂಧ ಬಂಧಿತರಾಗಿದ್ದ ಅಭಿಶೇಕ್‌ ಗುಪ್ತಾ, ದೇಶ್‌ಪಾಲ್‌ ಸಿಂಗ್‌, ತೇಜಿಂದರ್‌ ಸಿಂಗ್‌, ಹರವಿಂದರ್‌ ಸಿಂಗ್‌, ಸರಬ್ಜಿತ್‌ ಸಿಂಗ್‌ ಮತ್ತು ಪರ್ವಿಂದರ್‌ ಸಿಂಗ್‌ ಅವರನ್ನು ಸಿಬಿಐ ಬಂಧಿಸಿತ್ತು.

ಆರೋಪಿಗಳ ಸಿಬಿಐ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಸಿಬಿಐ, ನ್ಯಾಯಾಂಗ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT