ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯದ ಹಲವು ಕಡೆಗಳಲ್ಲಿ ಅಕ್ರಮವಾಗಿ ಕಲ್ಲಿದ್ದಲು ಗಣಿಗಾರಿಕೆ ಹಾಗೂ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ದಾಳಿ ಮಾಡಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಭಾಗವಾಗಿ ಈ ದಾಳಿ ನಡೆಸಲಾಗಿದೆ ಎಂದು ಇಡಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಪಿಎಂಎಲ್ಎ ಕಾಯ್ದೆ ಅಡಿಯಲ್ಲಿ ರಾಜ್ಯ ಪೊಲೀಸ್ ಅಧಿಕಾರಿ ಮನೋರಂಜನ್ ಮೊಂಡಲ್ ಸೇರಿದಂತೆ ಹಲವು ಅಧಿಕಾರಿಗಳು, ಉದ್ಯಮಿಗಳಿಗೆ ಸೇರಿದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ಮಾಡುತ್ತಿದ್ದಾರೆ.

ಕಿರಣ್ ಖಾನ್, ಶೇಖ್ ಅಖ್ತರ್, ಪ್ರಬೀರ್ ದತ್ತ, ಮಿರ್ಜಾ ಬೈಗ್ ಸೇರಿದಂತೆ ಇತರರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ಸಲಹೆ ಸಂಸ್ಥೆ ಐ–ಪ್ಯಾಕ್ ಕಚೇರಿಗಳ ಮೇಲೆ ಕಳೆದ ತಿಂಗಳು ಇಡಿ ದಾಳಿ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.