ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಹಗರಣ: ಇದೇ 26ಕ್ಕೆ ಶಿಕ್ಷೆಯ ಪ್ರಮಾಣ ಘೋಷಣೆ

Published 19 ಜುಲೈ 2023, 22:30 IST
Last Updated 19 ಜುಲೈ 2023, 22:30 IST
ಅಕ್ಷರ ಗಾತ್ರ

ನವದೆಹಲಿ: ಛತ್ತೀಸ್‌ಗಢ ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರಾಜ್ಯಸಭಾ ಸದಸ್ಯ ವಿಜಯ್‌ ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್‌.ಸಿ.ಗುಪ್ತಾ ಮತ್ತಿತರರ ಶಿಕ್ಷೆಯ ಪ್ರಮಾಣವನ್ನು ದೆಹಲಿ ನ್ಯಾಯಾಲಯ ಜುಲೈ 26ರಂದು ಪ್ರಕಟಿಸಲಿದೆ.

ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಸಂಜಯ್ ಬನ್ಸಾಲ್‌ ಅವರು ಸಿಬಿಐ ಮತ್ತು ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದರು.

ಜುಲೈ 13ರಂದು ದರ್ದಾ, ಗುಪ್ತಾ ಸೇರಿದಂತೆ ಏಳು ಮಂದಿಯನ್ನು ದೋಷಿಗಳೆಂದು ಕೋರ್ಟ್‌ ತೀರ್ಪು ನೀಡಿತ್ತು. ದರ್ದಾ ಪುತ್ರ ದೇವೇಂದ್ರ ದರ್ದಾ, ಇಬ್ಬರು ಸಾರ್ವಜನಿಕ ಸೇವಾ ಅಧಿಕಾರಿಗಳಾದ ಕೆ.ಎಸ್‌.ಕ್ರೊಫಾ ಮತ್ತು ಕೆ.ಸಿ.ಸಮ್ರಿಯಾ ಮತ್ತಿತರರನ್ನೂ ದೋಷಿಗಳೆಂದು ತೀರ್ಪು ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT