ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಬ್ಬಿ ಸಮುದ್ರದಲ್ಲಿ ಚೀನಾ ಪ್ರಜೆಯ ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್

Published 17 ಆಗಸ್ಟ್ 2023, 6:12 IST
Last Updated 17 ಆಗಸ್ಟ್ 2023, 6:12 IST
ಅಕ್ಷರ ಗಾತ್ರ

ಮುಂಬೈ: ಅತ್ಯಂತ ಸಾಹಸಮಯ ರಕ್ಷಣಾ ಕಾರ್ಯಾಚರಣೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಪನಾಮ ಧ್ವಜ ಹೊಂದಿದ್ದ ಸಂಶೋಧನಾ ಹಡಗಿನಿಂದ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದ್ದ ಚೀನಾದ ಪ್ರಜೆಯನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ಗುರುವಾರ ತಿಳಿಸಿದೆ.

ಕತ್ತಲು ಕವಿದ ವಾತಾವರಣ, ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ತುರ್ತು ವೈದ್ಯಕೀಯ ನೆರವಿಗಾಗಿ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದೆ.

ಆಗಸ್ಟ್ 16-17ರಂದು ಮುಂಬೈನಿಂದ ಸುಮಾರು 200 ಕಿ.ಮೀ. ದೂರದಲ್ಲಿ ಅರಬ್ಬಿ ಸಮುದ್ರದಲ್ಲಿ ಪನಾಮ ಧ್ವಜದ ಸಂಶೋಧನಾ ಹಡಗಿನಿಂದ (MV Dong Fang Kan Tan No 2) ತುರ್ತು ವೈದ್ಯಕೀಯ ನೆರವಿಗಾಗಿ ಚೀನಾದ ಪ್ರಜೆಯನ್ನು ರಕ್ಷಿಸಲಾಗಿದೆ ಎಂದು ಇಂಡಿಯನ್ ಕೋಸ್ಟ್ ಗಾರ್ಡ್ ತಿಳಿಸಿದೆ.

ಈ ಸಂದರ್ಭದಲ್ಲಿ ಚೀನಾ ಪ್ರಜೆ ಯಿನ್ ವೈಗ್ಯಾಂಗ್‌ಗೆ ಎದೆ ನೋವು ಹಾಗೂ ಹೃದಯಾಘಾತದ ಲಕ್ಷಣ ಕಾಣಿಸಿಕೊಂಡಿತ್ತು. ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯ ಕುರಿತು ಮುಂಬೈನ ಸಮುದ್ರ ರಕ್ಷಣಾ ಸಮನ್ವಯ ಕೇಂದ್ರಕ್ಕೆ ಮಾಹಿತಿ ತಲುಪಿಸಲಾಗಿತ್ತು.

ಸುಧಾರಿತ ಹಗುರ ಹೆಲಿಕಾಪ್ಟರ್‌ (ಎಎಲ್ಎಚ್) ಎಂಕೆ-3 ಮೂಲಕ ಚೀನಾ ಪ್ರಜೆಯನ್ನು ರಕ್ಷಿಸಲಾಗಿದೆ. ಈ ಸಂಬಂಧ ರಕ್ಷಣಾ ಕಾರ್ಯಾಚರಣೆಯ ವಿಡಿಯೊವನ್ನು ಭಾರತೀಯ ಕೋಸ್ಟ್ ಗಾರ್ಡ್ ಹಂಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT