ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮುದ್ರ ಮಧ್ಯೆ ಸಿಲುಕಿದ್ದ 13 ಮೀನುಗಾರರನ್ನು ರಕ್ಷಿಸಿದ ಕರಾವಳಿ ಭದ್ರತಾಪಡೆ

Published 22 ಮೇ 2024, 10:04 IST
Last Updated 22 ಮೇ 2024, 10:04 IST
ಅಕ್ಷರ ಗಾತ್ರ

ಕೊಚ್ಚಿ: ಎಂಜಿನ್‌ಗೆ ನೀರು ನುಗ್ಗಿ ಸಮುದ್ರ ಮಧ್ಯೆ ಸಿಲುಕಿದ್ದ ಕೇರಳ ತೀರದ 13 ಮಂದಿ ಮೀನುಗಾರರು ಹಾಗೂ ಅವರ ದೋಣಿಯನ್ನು ರಕ್ಷಿಸಲಾಗಿದೆ ಎಂದು ಭಾರತೀಯ ಕರಾವಳಿ ಭದ್ರತಾಪಡೆ ಬುಧವಾರ ತಿಳಿಸಿದೆ.

ಚಾವಕ್ಕಾಡ್ ಕರಾವಳಿಯಿಂದ 31 ನಾಟಿಕಲ್ ಮೈಲಿ ದೂರದಲ್ಲಿ ಸಿಲುಕಿದ್ದ ಭಾರತದ ಮೀನುಗಾರಿಕಾ ದೋಣಿ ಹಾಗೂ ಅದರಲ್ಲಿದ್ದ 13 ಮಂದಿ ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕರಾವಳಿ ಭದ್ರತಾಪಡೆ, ‘ಕರಾವಳಿ ರಕ್ಷಣಾ ನೌಕೆ ‘ಅಭಿನವ್’, ಪ್ರತಿಕೂಲ ಹವಾಮಾನದ ಹೊರತಾಗಿಯೂ, ಕಠಿಣ ಪರಿಸ್ಥಿತಿಯಲ್ಲಿ ಮೀನುಗಾರಿಕಾ ಹಡಗಿಗೆ ತಾಂತ್ರಿಕ ಸಹಾಯವನ್ನು ಒದಗಿಸಿದೆ’ ಎಂದು ಹೇಳಿದೆ.

ಕಾರ್ಯಾಚರಣೆಯಲ್ಲಿ 13 ಮಂದಿ ಮೀನುಗಾರರನ್ನು ರಕ್ಷಿಸಲಾಗಿದ್ದು, ದೋಣಿ ಮಂಬುರಂ ಬಂದರಿಗೆ ಸುರಕ್ಷಿತವಾಗಿ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಬರೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT