ರಾಯ್‌ಪುರ: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಎಸಗಿದ ಕಚ್ಚಾ ಬಾಂಬ್ ದಾಳಿಯಲ್ಲಿ ಸಿಆರ್‌ಪಿಎಫ್‌ನ ಅರಣ್ಯ ಕಾರ್ಯಾಚರಣೆ ಪಡೆ ಕೋಬ್ರಾದ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ. 9 ಮಂದಿ ಕಮಾಂಡೊಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಬೆಳಿಗ್ಗೆ ತಿಳಿಸಿದ್ದಾರೆ.

ಚಿಂತಲ್‌ನಾರ್ ಅರಣ್ಯ ಪ್ರದೇಶದಲ್ಲಿ ಶನಿವಾರ ರಾತ್ರಿ 9 ಗಂಟೆ ವೇಳೆಗೆ ಸ್ಫೋಟ ಸಂಭವಿಸಿದೆ. ಈ ವೇಳೆ ಸಹಾಯಕ ಕಮಾಂಡೆಂಟ್ ನಿತಿನ್ ಭಲೆರಾವ್ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳು ಕಮಾಂಡೊಗಳು ಕೋಬ್ರಾ ಪಡೆಯ 206ನೇ ಬೆಟಾಲಿಯನ್‌ಗೆ ಸೇರಿದವು. ಕೋಬ್ರಾ ಕಮಾಂಡೊಗಳು ಮತ್ತು ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.