ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಪಕ್ಷದ ಅಧಿಕೃತ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ, ಅದರ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದ್ದ ಸಿಜೆಪಿಯ ಎಕ್ಸ್ ಖಾತೆಯನ್ನು(@CJP_2029) ಮೇ 21ರಂದು ಭಾರತದಲ್ಲಿ ತಡೆಹಿಡಿಯಲಾಗಿತ್ತು. ಅದನ್ನು ಪ್ರಶ್ನಿಸಿ ವಕೀಲ ನಕುಲ್ ಗಾಂಧಿ ಮೂಲಕ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

@CJP_2029 ಖಾತೆಯನ್ನು ನಿರ್ಬಂಧಿಸಿದ ಬಳಿಕ, ‘ಕಾಕ್ರೋಚ್ ಇಸ್ ಬ್ಯಾಕ್’ ಎನ್ನುವ ಹೊಸ ಖಾತೆಯನ್ನು ಸಿಜೆಪಿ ಆರಂಭಿಸಿತ್ತು. ನಮ್ಮ ಜಾಲತಾಣ ಖಾತೆಯನ್ನು ನಿರ್ಬಂಧಿಸುವ ಮೂಲಕ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಅದರಲ್ಲಿ ಪೋಸ್ಟ್ ಮಾಡಿತ್ತು.

ಸಿಜೆಪಿಗೆ ಪರ–ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈ ಅಭಿಯಾನಕ್ಕೆ ಬಹಿರಂಗ ಬೆಂಬಲ ನೀಡಿವೆ.

ಸಿಜೆಪಿ ಜೊತೆ ನಕಲಿ ವಕೀಲರು ಮತ್ತು ಕಾರ್ಯಕರ್ತರು ನಂಟು ಹೊಂದಿದ್ದಾರೆ ಎಂಬ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.