ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಸರಾಸರಿ ಕನಿಷ್ಠ ತಾಪಮಾನ 10.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ

Last Updated 30 ನವೆಂಬರ್ 2020, 10:08 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ ಸರಾಸರಿ ಕನಿಷ್ಠ ತಾಪಮಾನವು 10.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ಇದು 71 ವರ್ಷಗಳಲ್ಲಿ ನವೆಂಬರ್‌ ತಿಂಗಳಲ್ಲಿ ದಾಖಲಾದಸರಾಸರಿ ಕನಿಷ್ಠ ಉಷ್ಣಾಂಶವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ದೆಹಲಿಯಲ್ಲಿ 1949ರ ನವೆಂಬರ್‌ ತಿಂಗಳಲ್ಲಿ ಸರಾಸರಿ ತಾಪಮಾನ 10.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಇದಾದ ಬಳಿಕ ಈ ವರ್ಷ 71 ವರ್ಷಗಳಲ್ಲಿ ಮೊದಲ ಬಾರಿ ಸರಾಸರಿ ಉಷ್ಣಾಂಶವು 10.2ಕ್ಕೆ ಇಳಿದಿದೆ.

1938ರ ನವೆಂಬರ್ ತಿಂಗಳಲ್ಲಿ 9.6 ಡಿಗ್ರಿ ಸೆಲ್ಸಿಯಸ್‌, 1931ರಲ್ಲಿ 9 ಮತ್ತು 1930ರಲ್ಲಿ 8.9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು.

ಸಾಮಾನ್ಯವಾಗಿ ನವೆಂಬರ್‌ ತಿಂಗಳಲ್ಲಿ ಸರಾಸರಿ ಕನಿಷ್ಠ ತಾಪಮಾನವು 12.9 ಡಿಗ್ರಿ ಸೆಲ್ಸಿಯಸ್‌ನಷ್ಟು ಇರುತ್ತದೆ. ಕಳೆದ ವರ್ಷವೂ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್‌ ಇತ್ತು. 2018ರಲ್ಲಿ 13.4, 2016 ಮತ್ತು 2017ರಲ್ಲಿ 12.8 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿತ್ತು.

ದೆಹಲಿಯಲ್ಲಿ ಈ ವರ್ಷ ನವೆಂಬರ್‌ 3, 20, 23 ಮತ್ತು 24 ರಂದು ಶೀತ ಅಲೆಗಳ ವಾತಾವರಣ ಸೃಷ್ಟಿಯಾಗಿತ್ತು.

‘ಸಾಮಾನ್ಯವಾಗಿ ಸತತ ಎರಡು ದಿನ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇದ್ದಾಗ ಶೀತ ಅಲೆಯನ್ನು ಘೋಷಿಸಲಾಗುತ್ತದೆ’ ಎಂದು ಐಎಂಡಿಯ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ತಿಳಿಸಿದರು.

ದೆಹಲಿಯಲ್ಲಿಸೋಮವಾರ ಕನಿಷ್ಠ ತಾಪಮಾನ 6.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ತಿಂಗಳಲ್ಲಿ ಒಟ್ಟು 8 ದಿನಗಳ ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿತ್ತು ಎಂದು ಐಎಂಡಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT