ಮುಜಫ್ಫರ್ನಗರ(ಉತ್ತರಪ್ರದೇಶ): ಇಲ್ಲಿನ ಬುದಾನಾ ಪಟ್ಟಣದಲ್ಲಿ ಶುಲ್ಕ ಕಟ್ಟದ ಕಾರಣ, ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ್ದರಿಂದ ಬೇಸತ್ತ ವಿದ್ಯಾರ್ಥಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

‘ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಯನ್ನು ಉಜ್ವಲ್ ಎಂದು ಗುರುತಿಸಲಾಗಿದೆ. ದೇಹದ ಶೇಕಡ 70ರಷ್ಟು ಭಾಗ ಸುಟ್ಟುಹೋಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಆತ್ಯಾಧುನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಇಲ್ಲಿನ ಡಿಎವಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬಿ.ಎ ಎರಡನೇ ವರ್ಷದ ವಿದ್ಯಾರ್ಥಿ ಉಜ್ವಲ್ ರಾಣಾ (22) ಶುಲ್ಕ ಕಟ್ಟಿರಲಿಲ್ಲ. ಹೀಗಾಗಿ, ಆಡಳಿತ ಮಂಡಳಿಯು ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಇದರಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು, ಆತ್ಮಹತ್ಯೆ ಯತ್ನ ನಡೆಸಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.