ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳ ಕಾಯಂಗೆ ಕೊಲಿಜಿಯಂ ಶಿಫಾರಸು

Published 31 ಆಗಸ್ಟ್ 2023, 19:52 IST
Last Updated 31 ಆಗಸ್ಟ್ 2023, 19:52 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾದ  ಅನಂತ ರಾಮನಾಥ ಹೆಗಡೆ ಮತ್ತು ಕೆ.ಎಸ್‌. ಹೇಮಲೇಖಾ ಅವರನ್ನು ಕಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದೆ. 

ಸಿಜೆಐ ಡಿ.ವೈ. ಚಂದ್ರಚೂಡ್‌ ಅಧ್ಯಕ್ಷತೆಯ ಕೊಲಿಜಿಯಂ, ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಇಬ್ಬರನ್ನು ಕಾಯಂ ನ್ಯಾಯಮೂರ್ತಿಗಳಾಗಿ ನೇಮಿಸುವಂತೆ ಶಿಫಾರಸಿನಲ್ಲಿ ತಿಳಿಸಿದೆ.

ಹೆಚ್ಚುವರಿ ನ್ಯಾಯಮೂರ್ತಿ ಸಿದ್ದಯ್ಯ ರಾಚಯ್ಯ ಅವರನ್ನು ಮತ್ತೆ ಒಂದು ವರ್ಷದ ಅವಧಿಗೆ ಅದೇ ಹುದ್ದೆಗೆ ಹೊಸದಾಗಿ ನೇಮಕ ಮಾಡಬಹುದು ಎಂದು ತಿಳಿಸಿದೆ.

ಮೇ ತಿಂಗಳಿನಲ್ಲಿ ಈ ಮೂವರನ್ನು ಕಾಯಂ ನ್ಯಾಯಮೂರ್ತಿಗಳಾಗಿ ನೇಮಿಸುವಂತೆ ಹೈಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿತ್ತು. ಇದಕ್ಕೆ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರು ಅನುಮೋದನೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT