ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಗಿ ಭದ್ರತೆ ನಡುವೆ ಹೈದರಾಬಾದ್‌ನಲ್ಲಿ ಮುನವ್ವರ್ ಫಾರೂಕಿ ಕಾರ್ಯಕ್ರಮ

ಕಮಿಡಿಯನ್ ಮುನವ್ವರ್ ಫಾರೂಕಿ ಕಾರ್ಯಕ್ರಮ
Last Updated 21 ಆಗಸ್ಟ್ 2022, 3:41 IST
ಅಕ್ಷರ ಗಾತ್ರ

ಬೆಂಗಳೂರು: ಕಮಿಡಿಯನ್ ಮುನವ್ವರ್ ಫಾರೂಕಿ ಕಾರ್ಯಕ್ರಮವನ್ನು ಹೈದರಾಬಾದ್‌ನಲ್ಲಿ ಬಿಗಿ ಪೊಲೀಸ್ ಭದ್ರತೆ ಸಹಿತ ನಡೆಸಲಾಗಿದೆ.

ತೆಲಂಗಾಣದ ಐಟಿ ಮತ್ತು ಉದ್ಯಮ ಖಾತೆ ಸಚಿವ ಕೆ.ಟಿ. ರಾಮರಾವ್ ಅವರ ಆಹ್ವಾನದ ಮೇರೆಗೆ ಮುನವ್ವರ್ ಫಾರೂಕಿ ಹೈದರಾಬಾದ್‌ನಲ್ಲಿ ‘ಡೋಂಗ್ರಿ ಟು ನೋವೇರ್‘ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

ಮುನವ್ವರ್ ಕಾರ್ಯಕ್ರಮ ನಡೆಸಿದರೆ, ಶೋ ನಡೆಯುವ ವೇದಿಕೆಗೆ ಬೆಂಕಿ ಹಚ್ಚುವುದಾಗಿಯೂ, ಫಾರೂಕ್ ಮೇಲೆ ಹಲ್ಲೆ ನಡೆಸುವುದಾಗಿಯೂ ಬಿಜೆಪಿ ಶಾಸಕ ರಾಜಾ ಸಿಂಗ್ ಬೆದರಿಕೆ ಒಡ್ಡಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಹೈದರಾಬಾದ್‌ನ ಹೈಟೆಕ್ ಸಿಟಿ ಪ್ರದೇಶದಲ್ಲಿ ಶಿಲ್ಪ ಕಲಾ ವೇದಿಕಾದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಲಪಂಥೀಯ ಸಂಘಟನೆಯ ಕೆಲವು ಕಾರ್ಯಕರ್ತರು ಅಡ್ಡಿಪಡಿಸಲು ಯತ್ನಿಸಿದ್ದರು. ಆದರೆ, ಅವರನ್ನು ಪೊಲೀಸರು ವಶಕ್ಕೆ ಪಡೆದು, ಮುನಾವರ್ ಕಾರ್ಯಕ್ರಮ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ.

ಹಿಂದುಗಳ ಭಾವನೆಗೆ ಧಕ್ಕೆ ತರುವ ಮಾತುಗಳನ್ನು ಮುನವ್ವರ್ ಆಡಿದ್ದು, ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಶಾಸಕ ಸಿಂಗ್ ತೆಲಂಗಾಣ ಸರ್ಕಾರವನ್ನು ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT