ನವದೆಹಲಿ (ಪಿಟಿಐ): ಇಲ್ಲಿನ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಕೋಮು ಭಾವನೆ ಪ್ರಚೋದಿಸುವ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಬಿಜೆಪಿಯ ಮಾಜಿ ವಕ್ತಾರ ಅಶ್ವಿನಿ ಉಪಾಧ್ಯಾಯ ಅವರಿಗೆ ದೆಹಲಿ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಉದ್ಭವ್ ಕುಮಾರ್ ಜೈನ್ ಅವರು, ವಕೀಲರೂ ಆದ ಬಿಜೆಪಿ ನಾಯಕ ಉಪಾಧ್ಯಾಯ ಅವರಿಗೆ ₹50 ಸಾವಿರದ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದರು.

ಆರೋಪಿಯ ಜಾಮೀನು ಕೋರಿಕೆಯ ಅರ್ಜಿ ವಿಚಾರಣೆಗೆ ಬಾಕಿ ಇರುವುದನ್ನು ಪರಿಗಣಿಸಿ ಕೋರ್ಟ್, ಮಂಗಳವಾರ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿತ್ತು.

ಜಂತರ್ ಮಂತರ್‌ನಲ್ಲಿ ಭಾರತ್ ಚೋಡೊ ಅಭಿಯಾನದ ಭಾಗವಾಗಿ ಭಾನುವಾರ ನಡೆದ ಪ್ರತಿಭಟನೆ ವೇಳೆ ಮುಸಲ್ಮಾನ ವಿರೋಧಿ ಘೋಷಣೆ ಕೂಗಿದ ಆರೋಪದಡಿ ಅಶ್ವಿನಿ ಉಪಾಧ್ಯಾಯ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದರು. ಮುಸಲ್ಮಾನರ ವಿರೋಧಿ ಘೋಷಣೆ ಕೂಗಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಕಾರಣ ದೆಹಲಿ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.