ಮುಜಾಫರ್ಪುರ (ಬಿಹಾರ): ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಹೇಳಿದ್ದಾರೆ ಎನ್ನಲಾದ ‘ಪಾಪದ ಮಹಿಳೆ’ ಹಾಗೂ ‘ಪಾಪ’ ಎಂಬ ಹೇಳಿಕೆ ವಿರುದ್ಧ ಬಿಹಾರದ ಮುಜಾಫರ್ಪುರ ಜಿಲ್ಲೆಯ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ದೇಶದ ಅತ್ಯುನ್ನತ ಸಾಂವಿಧಾನಿಕ ಅಧಿಕಾರಕ್ಕೆ ಅಗೌರವ ತೋರಿದ ಆರೋಪದ ಮೇಲೆ ಸೋನಿಯಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಮುಜಾಫರ್ಪುರ ಮೂಲದ ವಕೀಲ ಸುಧೀರ್ ಓಜಾ ಶನಿವಾರ ದೂರು ದಾಖಲಿಸಿದ್ದಾರೆ.

ಓಜಾ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಹ ಆರೋಪಿಗಳೆಂದು ಹೆಸರಿಸಿದ್ದಾರೆ. ಅವರ ವಿರುದ್ಧವೂ ಕಾನೂನು ಕ್ರಮ ಜರುಗಿಸಲು ಕೋರಿದ್ದಾರೆ.

ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಓಜಾ, ಸೋನಿಯಾ ಅವರು ‘ಪಾಪದ ಮಹಿಳೆ’ ಎಂದು ಹೇಳಿಕೆ ನೀಡುವ ಮೂಲಕ ಮುರ್ಮು ಅವರನ್ನು ಅವಮಾನಿಸಿದ್ದಾರೆ. ಇದರಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಆರೋಪಿಗಳು. ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಯಾಲಯವು ಫೆ. 10 ರಂದು ಪ್ರಕರಣದ ವಿಚಾರಣೆ ನಡೆಸಲಿದೆ.

ಸೋನಿಯಾ ಹೇಳಿದ್ದೇನು?

ಬಜೆಟ್ ಅಧಿವೇಶನ ಅಂಗವಾಗಿ, ರಾಷ್ಟ್ರಪತಿ ಮುರ್ಮು ಅವರು, ಶುಕ್ರವಾರ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು. ಬಳಿಕ, ಸೋನಿಯಾ ಗಾಂಧಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸತ್ ಭವನ ಸಂಕೀರ್ಣದಲ್ಲಿ ರಾಷ್ಟ್ರಪತಿಗಳ ಭಾಷಣ ಕುರಿತು ಚರ್ಚೆ ಮಾಡುತ್ತಿದ್ದರು.

‘ರಾಷ್ಟ್ರಪತಿಗಳ ಭಾಷಣ ನೀರಸವಾಗಿತ್ತೇ’ ಎಂದು ರಾಹುಲ್ ಅವರು ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದರು. ಆಗ, ‘ಪಾಪ ರಾಷ್ಟ್ರಪತಿ ಅವರು ಸುದೀರ್ಘ ಭಾಷಣ ಮುಗಿಸಿದಾಗ ಬಹಳ ದಣಿದಂತೆ ಕಂಡರು.. ಅವರಿಗೆ ಮಾತನಾಡಲೂ ಕಷ್ಟವಾಗುತ್ತಿತ್ತು, 'ಪಾಪ’ ಎಂದು ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
.ಮುರ್ಮು ಕುರಿತ ‘ಪಾಪ’ದ ಮಾತು: ಸೋನಿಯಾ ಹೇಳಿಕೆಗಳನ್ನು ಒಪ್ಪಲಾಗದು–ರಾಷ್ಟ್ರಪತಿ ಭವನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.