ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ (ಕೆಟಿಆರ್) ವಿರುದ್ಧ ಪ್ರಕರಣ ದಾಖಲಾಗಿದೆ

ತೆಲಂಗಾಣದ ಹನುಮಕೊಂಡ ಜಿಲ್ಲೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ವಾರಂಗಲ್ನಲ್ಲಿ ನಡೆದ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಕೆಟಿಆರ್, ರಾಹುಲ್ ಗಾಂಧಿ ಮತ್ತು ರೇವಂತ್ ರೆಡ್ಡಿ ಅವರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ದೂರು ನೀಡಿದ್ದರು.

ಸ್ಥಳೀಯ ಕಾಂಗ್ರೆಸ್ ನಾಯಕರು ಕೆಟಿಆರ್ ಹೇಳಿಕೆಗಳು ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಿವೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಅನ್ವಯ ಪೊಲೀಸರು ಕೆಟಿಆರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೆಲಂಗಾಣದ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಆರ್ಎಸ್ ನಡುವೆ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ ಈ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.