ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವವರ ಸಂಖ್ಯೆ ಮಂಗಳವಾರ 519ಕ್ಕೆ ಮುಟ್ಟಿದೆ.
ಸಂಜೆ 5.45ಕ್ಕೆ ನೀಡಿರುವ ಮಾಹಿತಿ ಪ್ರಕಾರ ದೇಶದ ವಿವಿಧೆಡೆ ಕೋವಿಡ್-19 ಪ್ರಕರಣಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 470. ವಿವಿಧೆಡೆ ದಾಖಲಾಗಿದ್ದ 40 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಸೋಂಕಿತರ ಪೈಕಿ 43 ವಿದೇಶಿಯರು ಸೇರಿದ್ದಾರೆ. ಈವರೆಗೆ ಕೊರೊನಾ ವೈರಸ್ ಸೋಂಕಿನಿಂದ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಸೋಮವಾರ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರ (ಇಬ್ಬರು), ಬಿಹಾರ, ಕರ್ನಾಟಕ, ದೆಹಲಿ, ಗುಜರಾತ್ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಕೋವಿಡ್-19 ಸಾವುಗಳು ವರದಿಯಾಗಿವೆ.