ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಚ್ಚತೀವು ದ್ವೀಪ: ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

Published 31 ಮಾರ್ಚ್ 2024, 6:09 IST
Last Updated 31 ಮಾರ್ಚ್ 2024, 6:09 IST
ಅಕ್ಷರ ಗಾತ್ರ

ನವದೆಹಲಿ: ಕಚ್ಚತೀವು ದ್ವೀಪವನ್ನು ನಿರ್ದಯವಾಗಿ ಶ್ರೀಲಂಕಾಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್‌ ನಂಬಿಕೆಗೆ ಅರ್ಹವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮೋದಿ, ‘ಕಚ್ಚತೀವುವನ್ನು ಕಾಂಗ್ರೆಸ್ ಹೇಗೆ ನಿರ್ದಯವಾಗಿ ಶ್ರೀಲಂಕಾಗೆ ಬಿಟ್ಟುಕೊಟ್ಟಿತು ಎಂಬ ಹೊಸ ಸಂಗತಿಗಳನ್ನು ಈ ವರದಿ ಬಹಿರಂಗಪಡಿಸುತ್ತಿವೆ. ಇದು ಪ್ರತಿಯೊಬ್ಬ ಭಾರತೀಯನಿಗೆ ಕೋಪ ತರಿಸುತ್ತದೆ. ಎಂದಿಗೂ ಕಾಂಗ್ರೆಸ್‌ ಅನ್ನು ನಂಬಲು ಸಾಧ್ಯವಿಲ್ಲ’ ಎಂದರು.

‘ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸಿರುವುದೇ ಕಾಂಗ್ರೆಸ್‌ನ 75 ವರ್ಷದ ಸಾಧನೆ’ ಎಂದರು.

ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಸೆಲ್ವಪೆರುಂತಗೈ, ‘ಮೊದಲು ಚೀನಾ ಗಡಿಯಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಅವರು ಹೇಳಬೇಕು. ಅರುಣಾಚಲ ಪ್ರದೇಶ, ಲಡಾಖ್‌ನಲ್ಲಿ ಎಷ್ಟು ಚದರ ಕಿಲೋಮೀಟರ್ ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ? ‌ಕಳೆದ 10 ವರ್ಷಗಳಲ್ಲಿ ಅವರ ಸರ್ಕಾರ ಏನು ಮಾಡಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT