ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ ಚರ್ಚೆ: ತನ್ನ ಸಂಸದರ ಕಡ್ಡಾಯ ಹಾಜರಾತಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್

Published 10 ಫೆಬ್ರುವರಿ 2024, 5:13 IST
Last Updated 10 ಫೆಬ್ರುವರಿ 2024, 5:13 IST
ಅಕ್ಷರ ಗಾತ್ರ

ನವದೆಹಲಿ: ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಲೋಕಸಭೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಚರ್ಚೆ ನಡೆಯುವ ಸಂಭವವಿದ್ದು, ತನ್ನ ಸಂಸದರ ಕಡ್ಡಾಯ ಹಾಜರಾತಿಗೆ ಕಾಂಗ್ರೆಸ್‌ ವಿಪ್ ಜಾರಿ ಮಾಡಿದೆ.

ಇಂದು ಸಂಸತ್ ಬಜೆಟ್ ಅಧಿವೇಶನದ ಕೊನೆಯ ದಿನವೂ ಹೌದು. ಪ್ರಸ್ತುತ ಲೋಕಸಭೆಯ ಕೊನೆಯ ಅಧಿವೇಶನವೂ ಹೌದು.

ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಗಿದ್ದು, ಇಂದು(ಶನಿವಾರ) ಕೊನೆಗೊಳ್ಳಲಿದೆ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ಅಲ್ಲದೇ ಕಲಾಪಕ್ಕೂ ಮುನ್ನ ಇಂಡಿಯಾ ಮೈತ್ರಿಕೂಟದ ಸಂಸದರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT