ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತಾರ್‌ನಿಂದ 8 ಭಾರತೀಯರ ಬಿಡುಗಡೆ: ಸಂತಸ ವ್ಯಕ್ತಪಡಿಸಿದ ಕಾಂಗ್ರೆಸ್

Published 12 ಫೆಬ್ರುವರಿ 2024, 6:25 IST
Last Updated 12 ಫೆಬ್ರುವರಿ 2024, 6:25 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ನೌಕಪಡೆಯ ಎಂಟು ಮಂದಿ ನಿವೃತ್ತ ಅಧಿಕಾರಿಗಳನ್ನು ಕತಾರ್‌ ಬಿಡುಗಡೆಗೊಳಿಸಿರುವುದಕ್ಕೆ ಕಾಂಗ್ರೆಸ್‌ ಸಂತೋಷ ವ್ಯಕ್ತಪಡಿಸಿದೆ. ಬಿಡುಗಡೆಗೊಂಡ ನಿವೃತ್ತ ಅಧಿಕಾರಿಗಳು ಹಾಗೂ ಅವರ ಕುಟುಂಬಕ್ಕೆ ಶುಭ ಹಾರೈಸಿದೆ.

2022ರಲ್ಲಿ ನಿವೃತ್ತ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಕಳೆದ ವರ್ಷ ಡಿಸೆಂಬರ್ 28ರಂದು ನ್ಯಾಯಾಲಯ ತೆರವುಗೊಳಿಸಿತ್ತು.

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ‘ಕತಾರ್‌ನ ನ್ಯಾಯಾಲಯದಿಂದ ಮರಣ ದಂಡನೆಗೆ ಒಳಪಟ್ಟಿದ್ದ ಎಂಟು ಮಂದಿ ನಿವೃತ್ತ ನೌಕರರು ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಈ ವೇಳೆ ರಾಷ್ಟ್ರದ ಸಂತೋಷ ಹಾಗೂ ಹರ್ಷದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಭಾಗಿಯಾಗಿದೆ ಎಂದು ತಿಳಿಸಿದ್ದಾರೆ.

‘ಭಾರತೀಯರನ್ನು ಬಿಡುಗಡೆಗೊಳಿಸಿದ ಕತಾರ್‌ ಸರ್ಕಾರದ ನಿರ್ಧಾರವನ್ನು ಪ್ರಶಂಸಿಸುತ್ತೇವೆ. ಬಿಡುಗಡೆಯಾದ 8 ಮಂದಿಯಲ್ಲಿ 7 ಮಂದಿ ದೇಶಕ್ಕೆ ವಾಪಸ್ ಆಗಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇಸ್ರೇಲ್ ಪರವಾಗಿ ಅವರು ಬೇಹುಗಾರಿಕೆ ಮಾಡುತ್ತಿದ್ದರು ಎಂಬ ಆರೋಪದಡಿ ಕಳೆದ ಅಕ್ಟೋಬರ್‌ನಲ್ಲಿ ಕತಾರ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು ಎಂದು ಮೂಲಗಳು ತಿಳಿಸಿವೆ.

ಕತಾರ್‌ನ ಖಾಸಗಿ ಕಂಪನಿಯೊಂದರಲ್ಲಿ ಜಲಾಂತರ್ಗಾಮಿ ನೌಕೆಗೆ ಸಂಬಂಧಿಸಿದ ಯೋಜನೆಗಾಗಿ ಈ 8 ಮಂದಿ ಕೆಲಸ ಮಾಡುತ್ತಿದ್ದರು. 2022ರಲ್ಲಿ ಅವರನ್ನು ಬೇಹುಗಾರಿಕೆ ಆರೋಪದಡಿ ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT