ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ನಾಯಕ ಅಭಿಷೇಕ್ ಸಿಂಗ್ವಿ ದಂಪತಿಗೆ ಕೊರೊನಾ ವೈರಸ್‌ ಸೋಂಕು 

Last Updated 26 ಜೂನ್ 2020, 13:41 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಮುಖಂಡ ಮತ್ತು ಪಕ್ಷದ ವಕ್ತಾರ ಅಭಿಷೇಕ್ ಸಿಂಗ್ವಿ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ. ಪರೀಕ್ಷೆಯಲ್ಲಿ ಅವರ ವರದಿ ಪಾಸಿಟಿವ್‌ ಬಂದ ನಂತರ ಅವರು ತಮ್ಮನ್ನು ಕ್ವಾರಂಟೈನ್‌ ಮಾಡಿಕೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಸಿಂಗ್ವಿ ಅವರಿಗೆ ಜ್ವರದಂತಹ ಕಡಿಮೆ ಲಕ್ಷಣಗಳು ಗೋಚರಿಸಿವೆ. ಅವರ ಪತ್ನಿಗೂ ವೈರಸ್‌ ಸೋಂಕು ತಗುಲಿದೆ. ಇದೇ ಹಿನ್ನೆಲೆಯಲ್ಲಿ ಅವರೂ ಕೂಡ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮನೆಯಲ್ಲಿ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದಾರೆ ಎನ್ನಲಾಗಿದೆ.

ಅವರ ಮಗ ಮತ್ತು ಇತರ ಕುಟುಂಬ ಸದಸ್ಯರು ಮತ್ತು ಸಿಬ್ಬಂದಿಯನ್ನು ಸಹ ಕೋವಿಡ್‌ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ವರದಿ ಇನ್ನೂ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT