ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

Last Updated 24 ಆಗಸ್ಟ್ 2022, 11:24 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ದೇಶದ ಹಿತಾಸಕ್ತಿಯ ದೃಷ್ಟಿಕೋನದಿಂದ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಅದು ಕೇವಲ ವೈಯಕ್ತಿಕ ಹಿತಾಸಕ್ತಿಯ ಮನಸ್ಥಿತಿಯಿಂದ ಪ್ರಭಾವಿತವಾಗಿದೆ ಎಂದು ಆರೋಪಿಸಿದ್ದಾರೆ.

ಪಕ್ಷದ ವರಿಷ್ಠೆ ಸೋನಿಯಾ ಗಾಂಧಿಅವರಿಗೆ ಬರೆದ ಪತ್ರದಲ್ಲಿ ಶೆರ್ಗಿಲ್ ಈ ಕುರಿತು ಉಲ್ಲೇಖಿಸಿದ್ದಾರೆ. ಈಗ ಕಾಂಗ್ರೆಸ್‌ ಪಕ್ಷದಲ್ಲಿ ನಿರ್ಣಯ ತೆಗೆದುಕೊಳ್ಳುವವರ ಸಿದ್ಧಾಂತ ಹಾಗೂ ದೂರದೃಷ್ಟಿಯು ಪಕ್ಷದ ಯುವ ಕಾರ್ಯಕರ್ತರು ಹಾಗೂ ಆಧುನಿಕ ಭಾರತದ ಆಕಾಂಕ್ಷೆಯೊಂದಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಹೇಳಿದ್ದಾರೆ.

ದೇಶದ ಹಿತದೃಷ್ಟಿಯಿಂದ ನಿರ್ಣಯ ತೆಗೆದುಕೊಳ್ಳಲಾಗುತ್ತಿಲ್ಲ ಎಂಬುದು ತುಂಬಾನೇ ನೋವನ್ನುಂಟು ಮಾಡಿದೆ. ಇದರ ಬದಲು ವೈಯಕ್ತಿಕ ಹಿತಾಸಕ್ತಿಯ ಮನಸ್ಥಿತಿಯಿಂದ ಪ್ರಭಾವಿತವಾಗಿದೆ. ತಳಹಂತಹ ವಾಸ್ತವವನ್ನು ನಿರಂತರವಾಗಿ ನಿರ್ಲಕ್ಷ್ಯಮಾಡಲಾಗುತ್ತಿದೆ. ಇದನ್ನು ನಾನು ನೈತಿಕವಾಗಿ ಒಪ್ಪಿಕೊಳ್ಳಲು ಮತ್ತು ಪಕ್ಷದಲ್ಲಿ ಕೆಲಸ ಮಾಡುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT