ಗಾಂಧಿನಗರ ಜಲ್ಲೆಯ ಕಲೋಲ್ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಆರೋಗ್ಯ ಕ್ಷೇತ್ರದ ಚಿತ್ರಣವೇ ಬದಲಾಗಿದೆ. ಆಯುಷ್ಮಾನ್ ಭಾರತ– ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗಳ ಅಡಿಯಲ್ಲಿ 60 ಕೋಟಿ ಬಡವರು ₹5 ಲಕ್ಷದವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದೂ ಹೇಳಿದ್ದಾರೆ.