ಮಲಪ್ಪುರಂ (ಕೇರಳ): ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಗನ್ಮ್ಯಾನ್ ಮತ್ತು ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ತರೂರ್ ಅವರ ಗನ್ಮ್ಯಾನ್ ರತೀಶ್ ಕೆ.ಪಿ. ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ 7.30ರ ಸುಮಾರಿಗೆ ವಂಡೂರಿನ ತಿರುವಾಲಿ ಸಮೀಪದ ಚೆಲ್ಲಿತ್ತೋಡ್ನಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ನಾಯಕ ಎ.ಪಿ. ಅನಿಲ್ ಕುಮಾರ್ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ತರೂರ್ ಅವರು ತೆರಳುತ್ತಿದ್ದಾಗ ಗಲಾಟೆ ನಡೆದಿದೆ.

‘ಚೆಲ್ಲಿತ್ತೋಡ್ ಸೇತುವೆ ಬಳಿ ರಸ್ತೆ ಕಿರಿದಾಗಿದ್ದು, ವೇಗವಾಗಿ ಚಲಿಸುವಂತೆ ಮುಂದಿದ್ದ ವಾಹನಕ್ಕೆ ಹೇಳಿದ್ದೆ. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಐದು ಜನರ ಗುಂಪು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ರತೀಶ್ ದೂರಿನಲ್ಲಿ ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.