ಮಲಪ್ಪುರ: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಭದ್ರತಾ ಸಿಬ್ಬಂದಿ ಹಾಗೂ ಕಾರು ಚಾಲಕನ ಮೇಲೆ ಐದು ಮಂದಿಯ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಕೇರಳದ ವಂಡೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಉಳಿದ ನಾಲ್ವರ ಗುರುತು ಪತ್ತೆಯಾಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು.

ಕಾಂಗ್ರೆಸ್ ನಾಯಕ ಎ.ಪಿ ಅನಿಲ್ಕುಮಾರ್ ಪರವಾಗಿ ಪ್ರಚಾರ ಮಾಡಲು ತರೂರ್ ಅವರು ಹೊರಟಿದ್ದ ವೇಳೆ ವಂಡೂರಿನ ಚೆಲ್ಲಿತೋಡ್ನಲ್ಲಿ ಘಟನೆ ನಡೆದಿದೆ. ತರೂರ್ ಅವರ ಭದ್ರತಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ ಎಂದರು.

ಎರಡು ವಾಹನಗಳಲ್ಲಿ ಬಂದ ಆರೋಪಿಗಳು ತರೂರ್ ಅವರ ವಾಹನವನ್ನು ಅಡ್ಡಗಟ್ಟಿದರು. ಆರೋಪಿಗಳನ್ನು ಸ್ಥಳದಿಂದ ದೂರ ಕಳುಹಿಸಲು ಮುಂದಾದ ಭದ್ರತಾ ಸಿಬ್ಬಂದಿ ಹಾಗೂ ಚಾಲಕನ ಮೇಲೆ ಹಲ್ಲೆ ಮಾಡಿದರು.

ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ತರೂರ್ ‘ಘಟನೆಯಲ್ಲಿ ನನಗೆ ಯಾವುದೇ ತೊಂದರೆಯಾಗಿಲ್ಲ. ನನ್ನ ಕ್ಷೇಮವನ್ನು ವಿಚಾರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ನಮ್ಮ ಸಿಬ್ಬಂದಿ ಮೇಲಿನ ದಾಳಿ ಕುರಿತು ಕಳವಳಗೊಂಡಿದ್ದೇನೆ. ಘಟನೆಯಿಂದ ನಮ್ಮ ಯಾವುದೇ ಕಾರ್ಯಕ್ರಮಗಳಿಗೂ ತೊಂದರೆಯಾಗಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.