ನವದೆಹಲಿ: ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ.

ಮಧ್ಯಪ್ರದೇಶದ 144, ಛತ್ತೀಸ್ಗಡದ 30, ತೆಲಂಗಾಣದ 55 ಅಭ್ಯರ್ಥಿ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
.ಚುನಾವಣೆ | ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಗೆಲ್ಲುತ್ತೇವೆ: ರಾಹುಲ್ ಗಾಂಧಿ.
ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಚಿಂದ್ವಾರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರ ಪುತ್ರ ಜೈವರ್ಧನ್ ಸಿಂಗ್ಗೆ ರಾಗಿಗತ್ ವಿಧಾನಸಭೆ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ಛತ್ತೀಸಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಪಟಾನ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅಂಬಿಕಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಟಿ.ಎಸ್.ಸಿಂಗ್ ದೇವ್ ಅವರಿಗೆ ಟಿಕೆಟ್ ನೀಡಲಾಗಿದೆ.

ಛತ್ತೀಸಗಢದಲ್ಲಿ ವಿಧಾನಸಭಾ ಚುನಾವಣೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥೆ ಅನುಮಾಲಾ ರೇವಂತ್ ರೆಡ್ಡಿ ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಿಎಲ್ಪಿ ನಾಯಕ ವಿಕ್ರಮಾರ್ಕ ಮಲ್ಲು ಮದಿರಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.