ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು, ಎಲ್‌ಡಿಎಫ್‌ಗೆ ಹಿನ್ನಡೆ

Published : 3 ಜೂನ್ 2022, 9:26 IST
ಫಾಲೋ ಮಾಡಿ
Comments

ಕೊಚ್ಚಿ: ಕೇರಳದ ತ್ರಿಕ್ಕಾಕರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮಾ ಥಾಮಸ್ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ತ್ರಿಕ್ಕಾಕರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಯುಡಿಎಫ್ ಸ್ಥಾನ ಉಳಿಸಿಕೊಂಡಿದೆ. ಇನ್ನೊಂದೆಡೆ ಆಡಳಿತಾರೂಢ ಸಿಪಿಐ (ಎಂ) ನೇತೃತ್ವದ ಎಲ್‌ಡಿಎಫ್, ಭಾರಿ ಹಿನ್ನಡೆ ಅನುಭವಿಸಿದೆ.

ಮಾಜಿ ಶಾಸಕ ಪಿ.ಟಿ. ಥಾಮಸ್ ನಿಧನದ ಬಳಿಕ ಉಪಚುನಾವಣೆ ನಡೆದಿದೆ. ಥಾಮಸ್ ಪತ್ನಿ ಉಮಾ ಥಾಮಸ್, ಎಲ್‌ಡಿಎಫ್ ಅಭ್ಯರ್ಥಿ ಜೊ ಜೋಸೆಫ್ ವಿರುದ್ಧ 25,000ಕ್ಕೂ ಹೆಚ್ಚು ಮತಗಳ ಅಂತರದ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.

ಉಮಾ ಥಾಮಸ್ 72,000 ಹಾಗೂ ಜೋಸೆಫ್ 47,000 ಮತಗಳನ್ನು ಪಡೆದರು. ಬಿಜೆಪಿ ಮೂರನೇ ಸ್ಥಾನ ಗಳಿಸಿತು.

ಕೇರಳದಲ್ಲಿ ಎರಡನೇ ಬಾರಿ ಸಿಎಂ ಆಗಿ ಆಯ್ಕೆಯಾಗಿರುವ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಸರ್ಕಾರವು, ಒಂದು ವರ್ಷ ಪೂರೈಸಿದ ಬಳಿಕ ನಡೆದ ಉಪಚುನಾವಣೆಯಲ್ಲಿ ಸೋಲು ಅನುಭವಿಸುವ ಮೂಲಕ ಹಿನ್ನಡೆ ಅನುಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT