ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾತ್ರೆಯಲ್ಲಿ ಪಾಲ್ಗೊಳ್ಳ‌ಲು ಕಾಂಗ್ರೆಸ್‌ ಒತ್ತಾಯ

Published 7 ಜನವರಿ 2024, 20:32 IST
Last Updated 7 ಜನವರಿ 2024, 20:32 IST
ಅಕ್ಷರ ಗಾತ್ರ

ನವದೆಹಲಿ: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನದ ರಕ್ಷಣೆಯ ಆಶಯ ಹೊಂದಿರುವ ಸಂಘಟನೆಗಳು ಮತ್ತು ಜನರನ್ನು ‘‌ಭಾರತ್‌ ಜೋಡೊ ನ್ಯಾಯ ಯಾತ್ರೆ’ಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್‌ ಭಾನುವಾರ ಆಹ್ವಾನಿಸಿದೆ.

ಜನವರಿ 14ರಿಂದ ಆರಂಭವಾಗಲಿರುವ ಈ ಯಾತ್ರೆಯು ಮಣಿಪುರದಿಂದ ಮುಂಬೈವರೆಗೆ ಸಾಗಲಿದೆ.

‘ಪ್ರತಿಯೊಬ್ಬ ಭಾರತೀಯನ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಎಕ್ಸ್‌ನಲ್ಲಿ ಹೇಳಿದ್ದಾರೆ.

ಯಾತ್ರೆಯು ಮಾರ್ಚ್‌ 20 ಅಥವಾ 21ರಂದು ಮುಂಬೈನಲ್ಲಿ ಸಮಾರೋಪಗೊಳ್ಳಲಿದೆ ಎಂದು‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT