‘ನಿಷ್ಪಕ್ಷಪಾತವಾಗಿ ಕೆಲಸ ಮಾಡದ ಚುನಾವಣಾ ಆಯೋಗ’
ಕಣ್ಣೂರು: ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸದೆ ಇರುವುದು ‘ದುರದೃಷ್ಟಕರ’ ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮುಸ್ಲಿಮರ ವಿರುದ್ಧದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಸಂಬಂಧ ಆಯೋಗ ತಕ್ಷಣವೇ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಹೇಳಿದರು.
‘ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು. ಪ್ರಧಾನಿಯವರ ಇಂಥ ಹೇಳಿಕೆಗಳು ದೇಶದಲ್ಲಿ ಬಿಜೆಪಿ ವಿರೋಧಿ ಭಾವನೆಗಳಿಗೆ ಶಕ್ತಿ ತುಂಬಲಿವೆ’ ಎಂದರು.