ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ರಕ್ಷಣೆಗೆ ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸಲಿದೆ ಕಾಂಗ್ರೆಸ್: ಸೋನಿಯಾ

Last Updated 11 ಏಪ್ರಿಲ್ 2023, 6:27 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಸಂವಿಧಾನ ರಕ್ಷಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕಾಂಗ್ರೆಸ್‌ ಕೈಜೋಡಿಸಲಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರವು ಎಲ್ಲ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಹಲವು ರಾಜ್ಯಗಳಲ್ಲಿ ಚುನಾವಣೆಗಳು ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಕಾಂಗ್ರೆಸ್‌ ಪಕ್ಷವು ತನ್ನ ಸಂದೇಶವನ್ನು ನೇರವಾಗಿ ಜನರ ಬಳಿಗೇ ಕೊಂಡೊಯ್ಯಲಿದೆ ಎಂದೂ ಅವರು ತಿಳಿಸಿದ್ದಾರೆ.

‘ದಿ ಹಿಂದೂ’ ದೈನಿಕದಲ್ಲಿ ಸೋನಿಯಾ ಗಾಂಧಿಯವರ ಲೇಖನವೊಂದು ಪ್ರಕಟವಾಗಿದ್ದು, ಅದರಲ್ಲಿ ಹಲವು ಅಂಶಗಳನ್ನು ಅವರು ಚರ್ಚಿಸಿದ್ದಾರೆ.

‘ಪ್ರಧಾನಿ ಮೋದಿ ಮತ್ತು ಅವರ ಸರ್ಕಾರವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ಹಾನಿಗೊಳಿಸುತ್ತಿದೆ. ಅವರ ಕ್ರಮಗಳು ಪ್ರಜಾಪ್ರಭುತ್ವದ ಬಗ್ಗೆ ಅವರಲ್ಲಿ ಆಳವಾಗಿ ಬೇರೂರಿರುವ ತಿರಸ್ಕಾರವನ್ನು ಪ್ರದರ್ಶಿಸುತ್ತವೆ’ ಎಂದು ಅವರು ಹೇಳಿರುವುದಾಗಿ ಲೇಖನದಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಹೆಚ್ಚುತ್ತಿರುವ ದ್ವೇಷ ಮತ್ತು ಹಿಂಸಾಚಾರವನ್ನು ಪ್ರಧಾನಿ ನಿರ್ಲಕ್ಷಿಸುತ್ತಾರೆ. ಒಮ್ಮೆಯೂ ಶಾಂತಿ ಅಥವಾ ಸೌಹಾರ್ದತೆಗಾಗಿ ಅವರು ಕರೆ ನೀಡಿಲ್ಲ. ಅಪರಾಧಿಗಳಿಗೆ ಶಿಕ್ಷೆಯಾಗಲು ಅವರು ಅವಕಾಶ ನೀಡಿಲ್ಲ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಬಿಜೆಪಿಯ ಮಿತ್ರರ ಆರ್ಥಿಕ ಶಕ್ತಿಯಿಂದ, ಸರ್ಕಾರದ ರಾಜಕೀಯ ಬೆದರಿಕೆಯಿಂದ ಮಾಧ್ಯಮಗಳ ಸ್ವಾತಂತ್ರ್ಯ ರಾಜಿಗೊಳ್ಳುತ್ತಾ ಬರುತ್ತಿದೆ ಎಂದು ಆರೋಪಿಸಿರುವ ಅವರು, ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುವ ಸಂಜೆಯ ಚರ್ಚೆಗಳು ಕೇಂದ್ರವನ್ನು ಪ್ರಶ್ನಿಸುವವರ ಸದ್ದಡಗಿಸುವ ಕಾರ್ಯಕ್ರಮಗಳಂತಾಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT