ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸದಾ ಅಂಬೇಡ್ಕರ್ ಅವರನ್ನು ಅವಮಾನಿಸಿದೆ: ಪ್ರಧಾನಿ ನರೇಂದ್ರ ಮೋದಿ

Published 14 ಏಪ್ರಿಲ್ 2024, 10:20 IST
Last Updated 14 ಏಪ್ರಿಲ್ 2024, 10:20 IST
ಅಕ್ಷರ ಗಾತ್ರ

ಹೋಶಂಗಾಬಾದ್‌: ಡಾ.ಬಿ.ಆರ್‌ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಸದಾ ಕಾಲ ಅವಮಾನಿಸಿದೆ. ಆದರೆ, ನಮ್ಮ ಸರ್ಕಾರ ಅವರನ್ನು ಗೌರವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜಯಂತಿ ದಿನ ಮಧ್ಯಪ್ರದೇಶದ ಹೋಶಂಗಾಬಾದ್‌ನಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆದಿವಾಸಿಗಳ ಕೊಡುಗೆಯನ್ನು ಕಾಂಗ್ರೆಸ್‌ ಗುರುತಿಸಲೇ ಇಲ್ಲ, ಆದರೆ ಬಿಜೆಪಿ ಸರ್ಕಾರ ಅವರನ್ನು ಗೌರವಿಸಿದೆ. ಅಂಬೇಡ್ಕರ್‌ ನೀಡಿದ ಸಂವಿಧಾನದಿಂದಾಗಿಯೇ ಮಹಿಳೆ ಈ ದೇಶದ ರಾಷ್ಟ್ರಪತಿಯಾಗಿದ್ದಾರೆ ಎಂದು ಹೇಳಿದರು.

‘ನಾನು ಮೂರನೇ ಬಾರಿಗೆ ಪ್ರಧಾನಿಯಾದರೆ ದೇಶದಲ್ಲಿ ಹಣದುಬ್ಬರ ಮಿತಿ ಮೀರಲಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ ದೇಶ ಯಾವ ದಿಕ್ಕಿನಲ್ಲಿ ಸಾಗಬೇಕು ಎಂದು ನಿರ್ಧರಿಸುವಲ್ಲಿ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ ಅಸಮರ್ಥವಾಗಿದೆ’ ಎಂದು ವಾಗ್ದಾಳಿ ನಡೆಸಿದರು.

‘ದೇಶದಾದ್ಯಂತ ‘ಮತ್ತೊಮ್ಮೆ ಮೋದಿ ಸರ್ಕಾರ’  ಎಂಬ ಘೋಷಣೆ ಮೊಳಗುತ್ತಿದೆ’. ಮೋದಿಗೆ ಸ್ವಂತ ಕನಸುಗಳಿಲ್ಲ; ನಿಮ್ಮ ಕನಸುಗಳೇ ನನ್ನ ಗುರಿ’ ಎಂದು ಹೇಳಿದರು.

ಭಗವಾನ್‌ ಬಿರ್ಸಾ ಮುಂಡಾ ಅವರ 150ನೇ ಜನ್ಮಶತಮಾನೋತ್ಸವ ಅಂಗವಾಗಿ 2025ನೇ ಇಸವಿಯನ್ನು ‘ಜನಜಾತೀಯ ಗೌರವ ದಿನ’ವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT