ಸಂವಿಧಾನದ 370 ವಿಧಿ ಅಡಿಯಲ್ಲಿ ಕಲ್ಪಿಸಲಾಗಿದ್ದ 'ವಿಶೇಷ ಸ್ಥಾನಮಾನ'ವನ್ನು ಕೇಂದ್ರ ಸರ್ಕಾರ ಹಿಂಪಡೆದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ.
2019ರ ಆಗಸ್ಟ್ 5ರಂದು 'ವಿಶೇಷ ಸ್ಥಾನಮಾನ' ಹಿಂಪಡೆದಿದ್ದ ಕೇಂದ್ರ, ಅದೇ ದಿನ, ರಾಜ್ಯವನ್ನು ವಿಭಜಿಸಿತ್ತು. ಲಡಾಖ್, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳನ್ನು ಘೋಷಿಸಿತ್ತು.
90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೂರು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಸೆಪ್ಟೆಂಬರ್ 18ರಂದು ಮೊದಲ ಹಂತದಲ್ಲಿ 24 ಕ್ಷೇತ್ರಗಳಿಗೆ ಮತದಾನವಾಗಿದೆ. ಸೆಪ್ಟೆಂಬರ್ 25ರಂದು ಎರಡನೇ ಹಂತದಲ್ಲಿ 26 ಕ್ಷೇತ್ರಗಳಿಗೆ ಮತ್ತು ಅಕ್ಟೋಬರ್ 1ರಂದು ಮೂರನೇ ಹಂತದದಲ್ಲಿ 40 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.