ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹತೂಕದ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ಗೆ ಕಾಂಗ್ರೆಸ್ ಛೀಮಾರಿ ಹಾಕಿದೆ. ಅಲ್ಲದೆ ಪೋಸ್ಟ್ ಅಳಿಸಿ ಹಾಕುವಂತೆಯೂ ನಿರ್ದೇಶಿಸಿದೆ. ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ.
.ರೋಹಿತ್ ಶರ್ಮಾ ದೇಹದ ತೂಕದ ಬಗ್ಗೆ ಮಾತು: ವಿವಾದಕ್ಕೆ ಕಾರಣವಾದ ಕೈ ವಕ್ತಾರೆ ಪೋಸ್ಟ್.
‘ರೋಹಿತ್ ಶರ್ಮಾ ದಪ್ಪಗಿದ್ದಾರೆ. ಅವರು ತೂಕ ಕಳೆದುಕೊಳ್ಳಬೇಕಾಗಿದೆ! ರೋಹಿತ್ ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ’ ಎಂದು ಬರೆದುಕೊಂಡಿದ್ದರು.

ಶಮಾ ಅವರ ಈ ಹೇಳಿಕೆ ವೈಯಕ್ತಿಕವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.

‘ಡಾ. ಶಮಾ ಮೊಹಮ್ಮದ್ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಪಕ್ಷಕ್ಕೆ ಸಂಬಂಧವಿಲ್ಲ. ಪೋಸ್ಟ್ ಅನ್ನು ಡಿಲೀಟ್ ಮಾಡುವಂತೆ ಅವರಿಗೆ ಸೂಚಿಸಲಾಗಿದೆ. ಭವಿಷ್ಯದಲ್ಲಿ ಭಾರಿ ಎಚ್ಚರಿಕೆ ಪಾಲಿಸಬೇಕು ಎಂದು ತಿಳಿಸಲಾಗಿದೆ’ ಎಂದು ಕಾಂಗ್ರೆಸ್ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ತಿಳಿಸಿದ್ದಾರೆ.
.Rohit Sharma Milestone: ಏಕದಿನದಲ್ಲಿ ರೋಹಿತ್ ಶರ್ಮಾ 11,000 ರನ್ ಸಾಧನೆ .
‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಕ್ರೀಡಾ ದಿಗ್ಗಜರ ಕೊಡುಗೆಗಳನ್ನು ಅತ್ಯುನ್ನತ ಗೌರವದಿಂದ ಕಾಣುತ್ತದೆ. ಅವರ ಪರಂಪರೆಯನ್ನು ದುರ್ಬಲಗೊಳಿಸುವ ಯಾವುದೇ ಹೇಳಿಕೆಗಳನ್ನು ಅನುಮೋದಿಸುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಶಮಾ ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
.ಫಾರ್ಮ್ ಸಮಸ್ಯೆ: ಮುಂಬೈ ರಣಜಿ ಅಭ್ಯಾಸ ಶಿಬಿರದಲ್ಲಿ ಭಾಗವಹಿಸಲು ರೋಹಿತ್ ಇಂಗಿತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.