ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಕುರಿತ ಮೋದಿ ಹೇಳಿಕೆ: ರಾಹುಲ್ ಗಾಂಧಿ ಲೇವಡಿ

‘ಎಂಟೈರ್ ಪೊಲಿಟಿಕಲ್ ಸೈನ್ಸ್’ ವಿದ್ಯಾರ್ಥಿ ಮಾತ್ರ ಸಿನಿಮಾ ನೋಡಿ ಗಾಂಧಿ ಬಗ್ಗೆ ತಿಳಿಯಬೇಕು’
Published 29 ಮೇ 2024, 23:27 IST
Last Updated 29 ಮೇ 2024, 23:27 IST
ಅಕ್ಷರ ಗಾತ್ರ

ನವದೆಹಲಿ: ‘ಗಾಂಧಿ’ ಸಿನಿಮಾ ಬರುವವರೆಗೂ ಮಹಾತ್ಮ ಗಾಂಧಿ ಬಗ್ಗೆ ಜಗತ್ತಿಗೆ ಗೊತ್ತಿರಲಿಲ್ಲ ಎನ್ನುವ ಪ್ರಧಾನಿ ನರೇಂದ್ರ ಹೇಳಿಕೆಯನ್ನು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ನಾಥೂರಾಂ ಗೋಡ್ಸೆ ಜತೆ ಗಾಂಧಿ ಕೊಲೆಯಲ್ಲಿ ಭಾಗಿಯಾಗಿದ್ದವರ ಸಿದ್ಧಾಂತವನ್ನು ಅನುಸರಿಸುವವರು ಎಂದಿಗೂ ಮಹಾತ್ಮನ ಸತ್ಯದ ಹಾದಿಯಲ್ಲಿ ನಡೆಯಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. 

ಪ್ರಧಾನಿ ಮೋದಿ ಹೇಳಿಕೆಯನ್ನು ಲೇವಡಿ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಎಂಟೈರ್ ಪೊಲಿಟಿಕಲ್ ಸೈನ್ಸ್’ ವಿದ್ಯಾರ್ಥಿ ಮಾತ್ರ ಸಿನಿಮಾ ನೋಡಿ ಗಾಂಧಿ ಬಗ್ಗೆ ತಿಳಿಯಬೇಕು’ ಎಂದಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಪ್ರಧಾನಿ ಮೋದಿ, ‘ಜಗತ್ತಿನಲ್ಲಿ ಮಹಾತ್ಮ ಗಾಂಧಿ ಶ್ರೇಷ್ಠ ವ್ಯಕ್ತಿ. ಈ 75 ವರ್ಷದಲ್ಲಿ ಅವರನ್ನು ಇಡೀ ಜಗತ್ತು ಅರಿಯುವಂತೆ ಮಾಡುವುದು ನಮ್ಮ ಜವಾಬ್ದಾರಿಯಲ್ಲವೇ. ಆದರೆ, ಅವರ ಬಗ್ಗೆ ಯಾರಿಗೂ ಗೊತ್ತಿಲ್ಲ. ‘ಗಾಂಧಿ’ ಸಿನಿಮಾ ಬಂದಾಗ ಮೊದಲ ಬಾರಿಗೆ ಈ ವ್ಯಕ್ತಿ ಯಾರು ಎನ್ನುವ ಬಗ್ಗೆ ಜಗತ್ತಿನಾದ್ಯಂತ ಕುತೂಹಲ ಮೂಡಿತ್ತು’ ಎಂದು ಹೇಳಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT