ನವದೆಹಲಿ: 'ಚುನಾವಣಾ ಆಯೋಗವು ಕೇಂದ್ರದ ಬಿಜೆಪಿ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿಲ್ಲ ಎಂಬುದನ್ನು ಸಾಬೀತುಪಡಿಸಬೇಕು' ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ತನ್ನ ನಿಲುವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಡವಳಿಕೆಯು ತೀವ್ರ ನಿರಾಶಾದಾಯಕವಾಗಿದೆ ಎಂದು ಹೇಳಿದೆ.

ಎಸ್ಐಆರ್ ನಡೆಯುತ್ತಿರುವ 12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ, ಈ ಕುರಿತು ಮಾತನಾಡಿದ್ದಾರೆ.

'ಮತದಾರರ ಪಟ್ಟಿಯನ್ನು ಸಮಗ್ರತೆಯನ್ನು ಕಾಪಾಡಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ' ಎಂದು ಅವರು ಪ್ರತಿಪಾದಿಸಿದ್ದಾರೆ.

'ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರ ವಿಶ್ವಾಸ ಕಂದುತ್ತಿರುವ ಈ ಸಮಯದಲ್ಲಿ ಎಸ್ಐಆರ್ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಡವಳಿಕೆಯು ತೀವ್ರ ನಿರಾಶಾದಾಯಕವಾಗಿದೆ' ಎಂದು ಅವರು ಹೇಳಿದ್ದಾರೆ.

'ಆಯೋಗವು ಆಡಳಿತದಲ್ಲಿರುವ ಬಿಜೆಪಿಯ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಾಬೀತುಪಡಿಸಬೇಕು. ದೇಶದ ಸಾಂವಿಧಾನಿಕ ಮತ್ತು ನಿಷ್ಠೆಯನ್ನು ಪ್ರದರ್ಶಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ.

'ಬಿಜೆಪಿಯು ಮತಕಳ್ಳತನಕ್ಕಾಗಿ ಎಸ್ಐಆರ್ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಹಾಗಾಗಿ ನಮ್ಮ ಕಾರ್ಯಕರ್ತರು ಅತ್ಯಂತ ಜಾಗರೂಕರಾಗಿರಬೇಕು. ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಾಶಮಾಡಲು ಬಿಡುವುದಿಲ್ಲ' ಎಂದು ಹೇಳಿದ್ದಾರೆ.
.SIR ಮುಂದೂಡಲು ಆಗ್ರಹ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ.Kerala SIR| BLO ಆತ್ಮಹತ್ಯೆ ಪ್ರಕರಣ; ಬಿಎಲ್ಒಗಳಿಂದ ಕೆಲಸ ಬಹಿಷ್ಕಾರ,ಪ್ರತಿಭಟನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.