ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲೇ ಜಮ್ಮು–ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಶಾಸನ ರಚಿಸಿ ಎಂದು ಕಾಂಗ್ರೆಸ್ ವರಿಷ್ಠರು ಆಗ್ರಹಿಸಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಕುರಿತಂತೆ ಜಂಟಿ ಪತ್ರವನ್ನು ಬುಧವಾರ ಬರೆದಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಲಡಾಕ್ ಅನ್ನು ಸಂವಿಧಾನದ ಆರನೇ ಶೆಡ್ಯೂಲ್ನಲ್ಲಿ ಸೇರ್ಪಡೆ ಮಾಡಲು ಶಾಸನ ರಚಿಸುವಂತೆಯೂ ಒತ್ತಾಯಿಸಿದ್ದಾರೆ.

‘ಐದು ವರ್ಷಗಳಿಂದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು–ಕಾಶ್ಮೀರದ ಜನರು ರಾಜ್ಯದ ಸ್ಥಾನಮಾನಕ್ಕಾಗಿ ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಈ ಬೇಡಿಕೆಯು ನ್ಯಾಯಸಮ್ಮತವಾಗಿದೆ. ಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವದ ಹಕ್ಕು ಆಗಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸ್ವಾಗತ: ರಾಜ್ಯದ ಸ್ಥಾನಮಾನವನ್ನು ಮರಳಿ ಕೊಡುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠರು ಪ್ರಧಾನಿಗೆ ಪತ್ರ ಬರೆದಿರುವುದನ್ನು ಜಮ್ಮು– ಕಾಶ್ಮೀರದ ಮುಖಂಡರು ಸ್ವಾಗತಿಸಿದ್ದಾರೆ.

‘ನಮಗೆ ನೀಡಿದ ಭರವಸೆ ಹೊರತುಪಡಿಸಿ ಬೇರೆ ಏನನ್ನೂ ಕೇಳುತ್ತಿಲ್ಲ’ ಎಂದಿರುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಇದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಸಹ ರಾಜ್ಯದ ಸ್ಥಾನಮಾಕ್ಕೆ ಬೇಡಿಕೆ ಸಲ್ಲಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.