ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರ ಸಹೋದರ, ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

‘ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಲಕ್ಷ್ಮಣ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಿದ್ದಾರೆ’ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಕಾರ್ಯದರ್ಶಿ ತಾರಿಕ್ ಅನ್ವರ್ ತಿಳಿಸಿದ್ದಾರೆ.

ಲಕ್ಷ್ಮಣ್ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರು ಹೈಕಮಾಂಡ್ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ ಎಂದು ತಾರಿಕ್ ಅನ್ವರ್ ಹೇಳಿದ್ದಾರೆ.

ಲಕ್ಷ್ಮಣ್ ಸಿಂಗ್ ಅವರು ಮಧ್ಯಪ್ರದೇಶದಿಂದ ಐದು ಬಾರಿ ಸಂಸದರಾಗಿ ಮತ್ತು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1990ರಲ್ಲಿ ಮೊದಲ ಬಾರಿಗೆ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದ ಅವರು, 1994ರಲ್ಲಿ ರಾಜ್ಗಢದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು.

2004ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಸಿಂಗ್, 2013ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.