ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಸ್ಪೀಕರ್ ಆಗಿ ಗಡ್ಡಂ ಪ್ರಸಾದ್ ಕುಮಾರ್ ಅವಿರೋಧ ಆಯ್ಕೆ

Published 14 ಡಿಸೆಂಬರ್ 2023, 6:32 IST
Last Updated 14 ಡಿಸೆಂಬರ್ 2023, 6:32 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರ ಪಡೆದ ಬೆನ್ನಲ್ಲೇ ವಿಧಾನಸಭೆಯ ಸ್ಪೀಕರ್ ಆಗಿ ಗಡ್ಡಂ ಪ್ರಸಾದ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಶಾಸಕ ಗಡ್ಡಂ ಪ್ರಸಾದ್ ಅವರ ಹೆಸರನ್ನು ಸ್ಪೀಕರ್ ಹುದ್ದೆಗೆ ಹೈಕಮಾಂಡ್ ನಾಮನಿರ್ದೇಶನ ಮಾಡಿತು. ಇದರ ಭಾಗವಾಗಿ ಗಡ್ಡಂ ಪ್ರಸಾದ್ ಕುಮಾರ್ ಅವರು ಸ್ಪೀಕರ್ ಚುನಾವಣೆಗೆ ಸಂಬಂಧಿಸಿದ ನಾಮಪತ್ರಗಳನ್ನು ಬುಧವಾರ ವಿಧಾನಸಭಾ ಕಾರ್ಯದರ್ಶಿಗೆ ಸಲ್ಲಿಸಿದ್ದರು.

ಸ್ಪೀಕರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವಂತೆ ಕಾಂಗ್ರೆಸ್ ನಾಯಕರು ಎಲ್ಲಾ ಪಕ್ಷಗಳನ್ನು ಕೇಳಿಕೊಂಡಿದ್ದರು. ಬಿಜೆಪಿ ಹೊರತುಪಡಿಸಿ ಬಿಆರ್‌ಎಸ್‌, ಎಐಎಂಐಎಂ ಹಾಗೂ ಸಿಪಿಐ ಪಕ್ಷಗಳು ಸಹಮತ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಸ್ಪೀಕರ್ ಆಯ್ಕೆ ಸರ್ವಾನುಮತದಿಂದ ನಡೆಯಿತು.

ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರು ನೂತನ ಸ್ಪೀಕರ್ ಗಡ್ಡಂ ಪ್ರಸಾದ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT