ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಕ್ಕಲಿಗರ ಮತಕ್ಕಾಗಿ ಕ್ರಮ ಕೈಗೊಳ್ಳದ ಕಾಂಗ್ರೆಸ್‌: ನಿರ್ಮಲಾ ಸೀತಾರಾಮನ್

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹಣಕಾಸು ಸಚಿವೆ ನಿರ್ಮಲಾ ವಾಗ್ದಾಳಿ
Published 4 ಮೇ 2024, 23:39 IST
Last Updated 4 ಮೇ 2024, 23:39 IST
ಅಕ್ಷರ ಗಾತ್ರ

ಪುಣೆ: ‘ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್‌ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ವಾಗ್ದಾಳಿ ನಡೆಸಿದರು.

‘ಒಕ್ಕಲಿಗರ ಮತಗಳನ್ನು ಕಳೆದುಕೊಳ್ಳಬಹುದು ಎಂದು ಕಾಂಗ್ರೆಸ್‌ ಹೆದರಿತ್ತು. ಆದ್ದರಿಂದಲೇ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯ ಮತದಾನ ಮುಗಿಯುವ ತನಕವೂ ಮೌನವಾಗಿತ್ತು. ಸುಮಾರು ಒಂದು ವರ್ಷದಿಂದಲೂ ಈ ವಿಷಯ ತಿಳಿದಿದ್ದರೂ, ಕಾನೂನು ಕ್ರಮ ಕೈಗೊಂಡಿಲ್ಲ’ ಎಂದು ಇಲ್ಲಿ ನಡೆದ ಸಭೆಯಲ್ಲಿ ಅವರು ಹೇಳಿದರು.

‘ಮಹಿಳೆಯರ ಮೇಲೆ ನಡೆಯುವ ಶೋಷಣೆ, ದೌರ್ಜನ್ಯವನ್ನು ಸಹಿಸುವುದಿಲ್ಲ. ಇದರ ವಿರುದ್ಧ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮೈತ್ರಿ ಪಕ್ಷಕ್ಕೆ ಸಂಬಂಧಿಸಿದ ವಿಷಯ ಇದಾಗಿದ್ದರೂ, ಅದು ಸ್ವೀಕಾರಾರ್ಹವಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದೇವೆ. ಈ ಬಗ್ಗೆ ತನಿಖೆ ನಡೆಸಲಿ’ ಎಂದು ನಿರ್ಮಲಾ ಹೇಳಿದರು.

‘ಕಾಂಗ್ರೆಸ್ ಸರ್ಕಾರದ ಸಚಿವರಿಗೆ ಪೆನ್‌ಡ್ರೈವ್‌ನಲ್ಲಿ ಏನಿದೆ ಎಂಬುದು ತಿಳಿದಿತ್ತು. ಆದರೆ, ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಭಾವಿಸಿರಲಿಲ್ಲ’ ಎಂದು ಸಚಿವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT