ನವದೆಹಲಿ: ಪಂಜಾಬ್ ಮತ್ತು ಬಿಹಾರದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ಭಾನುವಾರ ನಡೆಯಿತು.

ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷವು ಪಂಜಾಬ್ನ ಎಲ್ಲ 13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದರೆ, ‘ಮಹಾಘಟಬಂಧನ್’ ಭಾಗವಾಗಿದ್ದುಕೊಂಡು ಬಿಹಾರದಲ್ಲಿ 9 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್, ಇದುವರೆಗೆ 285 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಸಿಇಸಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕಿ ಸೋನಿಯಾ ಗಾಂಧಿ, ಮುಖಂಡರಾದ ಸಲ್ಮಾನ್ ಖುರ್ಷಿದ್, ಅಂಬಿಕಾ ಸೋನಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.