ಚೆನ್ನೈ: ದ್ರಾವಿಡ ರಾಜಕಾರಣದ ನೆಲದಲ್ಲಿ ಮತ್ತೊಂದು ಐತಿಹಾಸಿಕ ಬೆಳವಣಿಗೆಗೆ ತಮಿಳುನಾಡು ಸಾಕ್ಷಿಯಾಗಿದೆ. ಬರೋಬ್ಬರಿ 59 ವರ್ಷಗಳ ನಂತರ ಕಾಂಗ್ರೆಸ್, ವಿಜಯ್ ನೇತೃತ್ವದ ಸರ್ಕಾರದಲ್ಲಿ ಭಾಗಿಯಾಗಿದೆ.

ಮುಖ್ಯಮಂತ್ರಿ ವಿಜಯ್ ನಾಳೆ (ಗುರುವಾರ) ಸಚಿವ ಸಂಪುಟ ವಿಸ್ತರಿಸಲಿದ್ದು, ಕಾಂಗ್ರೆಸ್ ಅಧಿಕೃತವಾಗಿ ಸರ್ಕಾರದ ಭಾಗವಾಗಲಿದ್ದು, ಈ ಮಹತ್ವದ ಬೆಳವಣಿಗೆಯನ್ನು ಕಾಂಗ್ರೆಸ್ ಹೈಕಮಾಂಡ್ ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದೆ.

ನಾಳೆ ಕಾಂಗ್ರೆಸ್ನ ಇಬ್ಬರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಖಚಿತಪಡಿಸಿದ್ದಾರೆ.

ಕಾಂಗ್ರೆಸ್ ಶಾಸಕರಾದ ರಾಜೇಶ್ ಕುಮಾರ್ ಮತ್ತು ಪಿ. ವಿಶ್ವನಾಥನ್ ತಮಿಳುನಾಡು ಸಚಿವ ಸಂಪುಟ ಸೇರಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ. 59 ವರ್ಷಗಳ ನಂತರ ಕಾಂಗ್ರೆಸ್ ತಮಿಳುನಾಡು ಸರ್ಕಾರದಲ್ಲಿ ಭಾಗಿಯಾಗುತ್ತಿರುವುದು ನಮಗೆ ಅತ್ಯಂತ ಸಂತಸದ ಕ್ಷಣವಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷ ಡಿಎಂಕೆ ಜೊತೆ ಮೈತ್ರಿ ಹೊಂದಿದ್ದರೂ, ತಮಿಳುನಾಡಿನ ದ್ರಾವಿಡ ರಾಜಕಾರಣದ ಪ್ರಾಬಲ್ಯದಿಂದ ಅದಕ್ಕೆ ಸರ್ಕಾರದಲ್ಲಿ ಪಾಲು ಸಿಕ್ಕಿರಲಿಲ್ಲ. ಇತ್ತೀಚಿನ ವಿಧಾನಸಭಾ ಚುನಾವಣೆಗೂ ಮುನ್ನ ಸಂಪುಟದಲ್ಲಿ ಸ್ಥಾನ ನೀಡಬೇಕೆಂಬ ಕಾಂಗ್ರೆಸ್ ಬೇಡಿಕೆಯನ್ನು ಡಿಎಂಕೆ ತಿರಸ್ಕರಿಸಿತ್ತು. ಅಲ್ಲದೆ, ಕಾಂಗ್ರೆಸ್ ಕೇಳಿದ್ದ 41 ಸೀಟುಗಳ ಬದಲಿಗೆ 27 ಸ್ಥಾನಗಳನ್ನು ಮಾತ್ರ ನೀಡಿತ್ತು.

27 ಸ್ಥಾನಗಳ ಪೈಕಿ 5ರಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್, ಫಲಿತಾಂಶದ ಬೆನ್ನಲ್ಲೇ ಡಿಎಂಕೆ ಮೈತ್ರಿಯಿಂದ ಹೊರಬಂದು ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿತು.
.ಜಾತ್ಯತೀತ ಸರ್ಕಾರ ರಚನೆಗೆ ವಿಜಯ್ ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ: ವರದಿ.ಗೆದ್ದರೂ ಸೋತಂತಾದ ಟಿವಿಕೆ.. ವಿಜಯ್ ಜುಟ್ಟು ಹಿಡಿದ ವಿಸಿಕೆ.. ಅಧಿಕಾರಕ್ಕೆ ಹರಸಾಹಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.