ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರ | ಹಿಂದೂ, ಮುಸ್ಲಿಮರನ್ನು ವಿಭಜಿಸಲು ಕಾಂಗ್ರೆಸ್‌ ಯತ್ನ: ಮ.ಪ್ರದೇಶ ಸಿಎಂ

Published 29 ಮಾರ್ಚ್ 2024, 4:09 IST
Last Updated 29 ಮಾರ್ಚ್ 2024, 4:09 IST
ಅಕ್ಷರ ಗಾತ್ರ

ಖಜುರಾಹೊ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಷಯವನ್ನು ಹಿಂದೂ ಮತ್ತು ಮುಸ್ಲಿಮರನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಕಾಂಗ್ರೆಸ್ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್‌ ಆರೋಪಿಸಿದ್ದಾರೆ.

ಚಾಂಡ್ಲಾದಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭವ್ಯವಾದ ರಾಮಮಂದಿರ ದೇವಾಲಯ ಈಗ ನಿರ್ಮಾಣಗೊಂಡಿದೆ. ಆದರೆ, ಇದನ್ನು 1947ರಲ್ಲಿಯೇ ನಿರ್ಮಾಣ ಮಾಡಬಹುದಿತ್ತು’ ಎಂದು ತಿಳಿಸಿದ್ದಾರೆ.

ಜನವರಿ 22ರಂದು ನಡೆದ ಬಾಲ ರಾಮ ಪ್ರಾಣಪ್ರತಿಷ್ಠಾಪನೆಯ ಆಹ್ವಾನವನ್ನು ನಿರಾಕರಿಸುವ ಮೂಲಕ ಕಾಂಗ್ರೆಸ್‌ ದೇವರಿಗೆ ಅಗೌರವ ತೋರಿದೆ. ಇಂತಹ ಕೃತ್ಯ ಎಸಗಿದವರಿಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಯಾದವ್‌ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಭಾರತದ ಸಂಸ್ಕೃತಿಯ ಪತಾಕೆ ಎತ್ತರದಲ್ಲಿ ಹಾರುತ್ತಿದೆ. ಮೋದಿಯವರ ಜನಪ್ರಿಯತೆ ಎಷ್ಟಿದೆ ಅಂದರೆ, ಪಾಕ್‌ ಆಕ್ರಮಿತ ಕಾಶ್ಮೀರದ ಜನರು ಕೂಡ ಪ್ರಧಾನಿ ಅವರನ್ನು ಇಷ್ಟಪಡಲಾರಂಭಿಸಿದ್ದಾರೆ ಎಂದು ಯಾದವ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT