ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ | ಕಾಂಗ್ರೆಸ್ ತೊರೆದ ಮಿಲಿಂದ್ ದಿಯೋರಾ

Published 14 ಜನವರಿ 2024, 4:14 IST
Last Updated 14 ಜನವರಿ 2024, 4:14 IST
ಅಕ್ಷರ ಗಾತ್ರ

ಮುಂಬೈ: ಕಾಂಗ್ರೆಸ್ ಜೊತೆಗೆ ಮುನಿಸಿಕೊಂಡಿರುವ ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಇಂದು (ಭಾನುವಾರ) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಮಿಲಿಂದ್, 'ನನ್ನ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯಗೊಂಡಿದೆ. ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ ಜೊತೆಗಿನ ನನ್ನ ಕುಟುಂಬದ 55 ವರ್ಷಗಳ ಬಾಂಧವ್ಯವನ್ನು ಕೊನೆಗೊಳಿಸಿದ್ದೇನೆ. ನಮ್ಮನ್ನು ಬೆಂಬಲಿಸಿದ ಎಲ್ಲ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞನಾಗಿದ್ದೇನೆ' ಎಂದು ಹೇಳಿದ್ದಾರೆ.

ಮಾಜಿ ಸಂಸದ ಮಿಲಿಂದ್ ಅವರು ಏಕನಾಥ ಶಿಂದೆ ನೇತೃತ್ವದ ಶಿವಸೇನಾಗೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್‌ನ ಹಿರಿಯ ನಾಯಕ, ಏಳು ಬಾರಿಯ ಸಂಸದರಾಗಿದ್ದ ಮುರಳಿ ದಿಯೋರಾ ಅವರ ಮಗ. ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಮಿಲಿಂದ್ ಕಾಂಗ್ರೆಸ್ ಜತೆಗೆ ಮುನಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪಕ್ಷಕ್ಕೆ ಬರುವಂತೆ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಬಹಿರಂಗ ಆಹ್ವಾನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT