ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಮಾಜಿ ಸಿಎಂ ಕರುಣಾಕರನ್‌ ಪುತ್ರಿ ಪ‍ದ್ಮಜಾ ಬಿಜೆಪಿಗೆ ಸೇರ್ಪಡೆ

Published 7 ಮಾರ್ಚ್ 2024, 14:28 IST
Last Updated 7 ಮಾರ್ಚ್ 2024, 14:28 IST
ಅಕ್ಷರ ಗಾತ್ರ

ನವದೆಹಲಿ: ಕೇರಳದ ಮಾಜಿ ಮುಖ್ಯಮಂತ್ರಿ ಕೆ.ಕರುಣಾಕರನ್‌ ಅವರ ಪುತ್ರಿ, ಕಾಂಗ್ರೆಸ್‌ ನಾಯಕಿ ಪದ್ಮಜಾ ವೇಣುಗೋಪಾಲ್‌ ಅವರು ಗುರುವಾರ‌ ಬಿಜೆಪಿಗೆ ಸೇರಿದ್ದಾರೆ.

ಕೇಂದ್ರದ ಮಾಜಿ ಸಚಿವ ಪ್ರಕಾಶ್‌ ಜಾವಡೇಕರ್‌ ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪದ್ಮಜಾ ಅವರು ಕಮಲ ಪಾಳಯಕ್ಕೆ ಸೇರ್ಪ‍ಡೆಯಾದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪದ್ಮಜಾ ಅವರು, ‘ಬಿಜೆಪಿ ಸೇರಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ, ಅದರೊಂದಿಗೆ ಸ್ವಲ್ಪ ಆತಂಕವು ಇದೆ. ಹಲವು ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದ ನಾನು ಸಂತೋಷವಾಗಿರಲಿಲ್ಲ, ಅದರಲ್ಲೂ ಕಳೆದ ವಿಧಾನಸಭೆ ಚುನಾವಣೆಯ ಬಳಿಕ ತೀವ್ರ ಅಸಮಾಧಾನ ಉಂಟಾಗಿತ್ತು. ಈ ಕಾರಣಕ್ಕೆ ಪಕ್ಷವನ್ನು ತ್ಯಜಿಸಲು ನಿರ್ಧರಿಸಿದೆ’ ಎಂದರು.

‘ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸುವ ಉದ್ದೇಶದಿಂದ ಹಲವು ಬಾರಿ ಕಾಂಗ್ರೆಸ್‌ನ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದ್ದೆ, ಆದರೆ ಅವರು ಅವಕಾಶ ನೀಡಲಿಲ್ಲ. ಎಲ್ಲ ಪಕ್ಷಗಳಲ್ಲಿ ಸಮರ್ಥ ನಾಯಕತ್ವ ಇದೆ. ಆದರೆ, ಕಾಂಗ್ರೆಸ್‌ನಲ್ಲಿ ನಾಯಕತ್ವ ಇಲ್ಲ. ಸೋನಿಯಾ ಗಾಂಧಿಯವರ ಬಗ್ಗೆ ಗೌರವವಿದೆ. ಅವರು ಭೇಟಿಯಾಗುವ ಅವಕಾಶವನ್ನೆ ನೀಡಲಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT