ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಸ್‌ಪೋರ್ಟ್‌ಗಾಗಿ ರಾಹುಲ್ ಗಾಂಧಿ ಮನವಿ: ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿದ ಕೋರ್ಟ್

Published 24 ಮೇ 2023, 9:35 IST
Last Updated 24 ಮೇ 2023, 9:35 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಹೊಸದಾಗಿ ಪಾಸ್‌ಪೋರ್ಟ್‌ ಪಡೆಯುವ ಸಂಬಂಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯ ಮೇ 26ಕ್ಕೆ ಮುಂದೂಡಿದೆ.

ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ರಾಹುಲ್‌ ಗಾಂಧಿ ಅವರು ಇತ್ತೀಚೆಗಷ್ಟೇ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದರ ಬೆನ್ನಲ್ಲೇ ಅವರು ರಾಜತಾಂತ್ರಿಕ ಪ್ರಯಾಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಹೀಗಾಗಿ ಅವರು 'ಸಾಮಾನ್ಯ ಪಾಸ್‌ಪೋರ್ಟ್‌' ಪಡೆದುಕೊಳ್ಳಲು 'ನಿರಾಕ್ಷೇಪಣಾ ಪತ್ರ' ನೀಡುವಂತೆ ಕೋರಿ ಮಂಗಳವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್‌ ವೈಭವ್‌ ಮೆಹ್ತಾ ಅವರು ಈ ಅರ್ಜಿಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ.

ಅರ್ಜಿದಾರರ ಸಂಸತ್‌ ಸದಸ್ಯತ್ವವು 2023ರ ಮಾರ್ಚ್‌ನಲ್ಲಿ ಅಂತ್ಯಗೊಂಡಿದೆ. ಅದರಂತೆ ಅವರು ರಾಜತಾಂತ್ರಿಕ ಪ್ರಯಾಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಇದೀಗ ಹೊಸದಾಗಿ ಸಾಮಾನ್ಯ ಪಾಸ್‌ಪೋರ್ಟ್‌ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅದಕ್ಕಾಗಿ ನ್ಯಾಯಾಲಯವು ಅನುಮತಿ ಹಾಗೂ ನಿರಪೇಕ್ಷಣಾ ಪತ್ರ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನ್ಯಾಯಾಲಯವು, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್‌ ಹಾಗೂ ಇತರರಿಗೆ 2015ರ ಡಿಸೆಂಬರ್‌ 19ರಂದು ಜಾಮೀನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT