ನವದೆಹಲಿ: ದೀಪಾವಳಿ ಆಚರಣೆ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಮೋದಿ ಸರ್ಕಾರ ಜನರಿಗಾಗಿ ಸಂವೇದನಾಶೀಲ ಹೃದಯವನ್ನು ಹೊಂದಬೇಕು ಆಶಿಸುತ್ತೇನೆ‘ ಎಂದು ಹೇಳಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ಇದು ದೀಪಾವಳಿ ಆಚರಿಸುವ ಸಮಯ. ಅಗತ್ಯ ವಸ್ತುಗಳ ಬೆಲೆಗಳು ಉತ್ತುಂಗದಲ್ಲಿವೆ. ಇದು ವ್ಯಂಗ್ಯದ ವಿಷಯವಲ್ಲ. ಮೋದಿ ಸರ್ಕಾರ, ಸಾರ್ವಜನಿಕರ ಬಗ್ಗೆ ಸೂಕ್ಷ್ಮ ಹೃದಯ ಹೊಂದಬೇಕೆಂದು ನಾನು ಬಯಸುತ್ತೇನೆ‘ ಎಂದು ಹೇಳಿದ್ದಾರೆ.

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರವನ್ನು ರಾಹುಲ್ ತೀವ್ರವಾಗಿ ಟೀಕಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯ ಹೆಸರಲ್ಲಿ ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.