ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಭೇಟಿ ಮಾಡಿದ ಭೂಪೇಂದ್ರ ಸಿಂಗ್‌ ಹೂಡಾ

Published 22 ಜುಲೈ 2023, 13:05 IST
Last Updated 22 ಜುಲೈ 2023, 13:05 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪೇಂದ್ರ ಸಿಂಗ್‌ ಹೂಡಾ ಅವರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದಾರೆ.

ಜಂತರ್‌ ಮಂತರ್‌ನಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಭೂಪೇಂದ್ರ ಸಿಂಗ್‌ ಇಂದು(ಶನಿವಾರ) ಭೇಟಿ ಮಾಡಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹರಿಯಾಣದಲ್ಲಿ ಕಾಂಗ್ರೆಸ್‌ ಕೈಗೊಳ್ಳಬೇಕಾದ ಕಾರ್ಯತಂತ್ರದ ಬಗ್ಗೆ ಹಾಗೂ ಬಿಜೆಪಿ ರಾಜ್ಯದಲ್ಲಿ ನಡೆಸುತ್ತಿರುವ ಚುನಾವಣಾ ಪ್ರಚಾರ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹರಿಯಾದಲ್ಲಿ ಹತ್ತು ಸ್ಥಾನಗಳ ಪೈಕಿ ಒಂದೇ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT