ಮುಂಬೈ: ಅಹ್ಮದ್‌ನಗರ ಲೋಕಸಭೆ ಕ್ಷೇತ್ರದಿಂದ ತಮ್ಮ ಮಕ್ಕಳು ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಹಾಗೂ ಬಿಜೆಪಿ ಸಂಸದ ದಿಲೀಪ್ ಗಾಂಧಿ ಗುರುವಾರ ಮಾತುಕತೆ ನಡೆಸಿದ್ದಾರೆ.

ಸಭೆ ನಡೆದ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ಜೊತೆ ದೂರವಾಣಿ ಮೂಲಕ ಮಾತನಾಡಿದ ದಿಲೀಪ್ ಸಿಂಗ್ ಅವರು, ‘ಈ ಕ್ಷೇತ್ರದಿಂದ ನನ್ನ ಮಗ ಹಾಗೂ ಅವರ ಮಗ ಸ್ಪರ್ಧೆ ನಡೆಸಲಿರುವ ಸಂಬಂಧ ಮಾತುಕತೆ ನಡೆಸಿದ್ದೇವೆ. ಅವರು(ರಾಧಾಕೃಷ್ಣ ವಿಖೆ ಪಾಟೀಲ್) ತಮ್ಮ ಮಗನ ವಿರುದ್ಧ ನನ್ನ ಮಗನನ್ನು ಕಣಕ್ಕಿಳಿಸದಂತೆ ಮನವಿ ಮಾಡಿದ್ದಾರೆ. ಆದರೆ ಈ ವಿಚಾರದಲ್ಲಿ ನಾನು ಯಾವುದೇ ಭರವಸೆ ನೀಡಿಲ್ಲ. ತೀರ್ಮಾನ ತೆಗೆದುಕೊಳ್ಳುವುದಕ್ಕೆ ಸಮಯಾವಕಾಶ ಬೇಕಿದೆ’ ಎಂದು ತಿಳಿಸಿದ್ದಾರೆ.

ಹಿರಿಯ ನಾಯಕ ಪಾಟಿಲ್ ಅವರ ಮಗಸುಜಯ್ ವಿಖೆ ಪಾಟೀಲ್ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅವರಿಗೆ ಅಹ್ಮದ್‌ನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಿಂದ ಮೂರು ಬಾರಿ ಗೆದ್ದಿರುವ ಮತ್ತುಹಾಲಿ ಸಂಸದರೂ ಆಗಿರುವ ದಿಲೀಪ್ ಗಾಂಧಿ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡಲುಬಿಜೆಪಿ ನಿರಾಕರಿಸಿತ್ತು. ಹೀಗಾಗಿ ಅವರ ಪುತ್ರ ಸುವೇಂದ್ರ ಇದೇ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯು ಏಪ್ರಿಲ್ 11,18, 23 ಹಾಗೂ 29ರಂದುನಾಲ್ಕು ಹಂತಗಳಲ್ಲಿ ನಡೆಯಲಿದೆ. ಫಲಿತಾಂಶವು ಮೇ 23ರಂದು ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.