ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲ ಪ್ರದೇಶ | ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಏನನ್ನೂ ಮಾಡಿಲ್ಲ: ಕಂಗನಾ

Published 6 ಆಗಸ್ಟ್ 2024, 10:55 IST
Last Updated 6 ಆಗಸ್ಟ್ 2024, 10:55 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಉಂಟಾದ ಹಠಾತ್‌ ಪ್ರವಾಹದಲ್ಲಿ ಹಾನಿಗೊಳಗಾದ ಸಮೇಜ್‌ ಗ್ರಾಮಕ್ಕೆ ನಟಿ, ಸಂಸದೆ ಕಂಗನಾ ರನೌತ್‌ ಇಂದು (ಮಂಗಳವಾರ) ಭೇಟಿ ನೀಡಿದರು.

ಪ್ರವಾಹದ ಸಂತ್ರಸ್ತರಿಗೆ ಸಹಾಯ ಮಾಡಲು ಕಾಂಗ್ರೆಸ್‌ ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಕಂಗನಾ ಆರೋಪಿಸಿದ್ದಾರೆ.

‘ಈ ಅವಘಡವು ಹೃದಯ ವಿದ್ರಾವಕ ದುರಂತವಾಗಿದೆ. ಮಕ್ಕಳು ಸೇರಿದಂತೆ ತಮ್ಮ ಕುಟುಂಬ ಸದಸ್ಯರನ್ನು ಜನರು ಕಳೆದುಕೊಂಡಿದ್ದಾರೆ. ಇದರಿಂದಾಗಿ ಅವರು ಭಯಭೀತರಾಗಿದ್ದಾರೆ ಮತ್ತು ಆಘಾತಕ್ಕೊಳಗಾಗಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ತಕ್ಷಣವೇ ಹಣಕಾಸಿನ ನೆರವು ಒದಗಿಸಬೇಕು ಎಂದು ನಾನು ರಾಜ್ಯ ಸರ್ಕಾರವನ್ನು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಅವರು ಹೇಳಿದರು.

ಕಳೆದ ವರ್ಷ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಮಂಜೂರು ಮಾಡಿದ ಹಣದ ಕುರಿತು ವಿಶೇಷ ತನಿಖೆ ನಡೆಸಬೇಕೆಂದು ಕಂಗನಾ ಆಗ್ರಹಿಸಿದರು.

ಕಳೆದ ಒಂದು ವಾರದಿಂದ ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಕುಲ್ಲುವಿನಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಹಠಾತ್‌ ಪ್ರವಾಹದಲ್ಲಿ 40 ಮಂದಿ ಕಾಣೆಯಾಗಿದ್ದು, 14 ಜನರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

30ಕ್ಕೂ ಹೆಚ್ಚು ಜನರು ಕಾಣೆಯಾಗಿರುವ ಸಮೇಜ್‌ ಗ್ರಾಮದಲ್ಲಿ ಸಂತ್ರಸ್ತ ಜನರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರ ಏನನ್ನೂ ಮಾಡಿಲ್ಲ. ಇಲ್ಲಿನ ಸಚಿವರು ಪ್ರವಾಹ ಪೀಡಿತ ಜನರ ನೆರವಿಗಾಗಿ ಒಂದೇ ಒಂದೂ ಕೆಲಸವನ್ನು ಮಾಡದಿರುವುದು ಅಮಾನವೀಯ ಎಂದು ಅವರು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT