ನವದೆಹಲಿ: ಪಕ್ಷದ ಆಂತರಿಕ ಕಲಹದ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಈ ತಿಂಗಳ ಕೊನೆಗೆ ಸಭೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಪಕ್ಷದೊಳಗಿನ ಭಿನ್ನಮತ, ಪ್ರಮುಖ ನಾಯಕರು ಪಕ್ಷ ತ್ಯಜಿಸುತ್ತಿರುವ ಬಗ್ಗೆ ಕಾರ್ಯಕಾರಿ ಸಮಿತಿ ಸಭೆ ಕರೆದು ಚರ್ಚಿಸಬೇಕು ಎಂದು ‘ಜಿ–23’ರ ಮುಖಂಡರು ಸೇರಿದಂತೆ ಅನೇಕ ನಾಯಕರು ಇತ್ತೀಚೆಗೆ ಆಗ್ರಹಿಸಿದ್ದರು.

ಸಭೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಆದರೆ, ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗುವುದು ಹಾಗೂ ಆಂತರಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈಗಾಗಲೇ ತಿಳಿಸಿದ್ದಾರೆ ಎಂದೂ ಮೂಲಗಳು ಹೇಳಿವೆ.

ಓದಿ:'ಪಕ್ಷಕ್ಕೆ ಅಧ್ಯಕ್ಷರೇ ಇಲ್ಲ, ನಿರ್ಧಾರಗಳು ಯಾರವೋ'–ಕಾಂಗ್ರೆಸ್ನ ಕಪಿಲ್ ಸಿಬಲ್

ಕಾಂಗ್ರೆಸ್ನ ಪಂಜಾಬ್ ಘಟಕದಲ್ಲಿ ಉಂಟಾದ ಬಿಕ್ಕಟ್ಟಿನ ಬಳಿಕ ಕಾರ್ಯಕಾರಿ ಸಮಿತಿ ಸಭೆ ಕರೆಯುವಂತೆ ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಸೇರಿದಂತೆ ‘ಜಿ–23’ರ ಪ್ರಮುಖ ನಾಯಕರು ಆಗ್ರಹಿಸಿದ್ದರು.

ಆಜಾದ್ ಅವರು ಸೋನಿಯಾಗೆ ಪತ್ರ ಬರೆದಿದ್ದಲ್ಲದೆ, ಸಲಹೆಗಳನ್ನು ಪಕ್ಷವು ಹತ್ತಿಕ್ಕಬಾರದು, ಸ್ವಾಗತಿಸಬೇಕು ಎಂದು ಸೂಚಿಸಿದ್ದರು.

ಪಂಜಾಬ್ನಲ್ಲಿ ಕಾಂಗ್ರೆಸ್ ಬಿಕ್ಕಟ್ಟಿನ ಕಪಿಲ್ ಸಿಬಲ್ ಬೇಸರ ವ್ಯಕ್ತಪಡಿಸಿದ್ದರು. ನಮ್ಮ ಪಕ್ಷದಲ್ಲಿ ಅಧ್ಯಕ್ಷರೇ ಇಲ್ಲ, ಹಾಗಾಗಿ ಈ ಎಲ್ಲ ನಿರ್ಧಾರಗಳನ್ನು ಯಾರು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದಿಲ್ಲಎಂದು ಸಿಬಲ್ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಸಿಬಲ್ ಮನೆ ಎದುರು ಪ್ರತಿಭಟನೆ ನಡೆಸಿದ್ದರು.

ಓದಿ:'ಬೇಗ ಗುಣಮುಖರಾಗಿ': ಕಪಿಲ್ ಸಿಬಲ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.