ನವದೆಹಲಿ: 2020ರದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿಪಕ್ಷದ ಅರವಿಂದ್ ಕೇಜ್ರಿವಾಲ್ ಹಾಗೂ ಬಿಜೆಪಿಯ ಅಮಿತ್ ಶಾ ಬಿರುಸಿನಿಂದ ಚುನಾವಣಾ ಪ್ರಚಾರ ನಡೆಸುತ್ತಿದ್ದರೆ, ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪರ ಪ್ರಚಾರ ನಡೆಸದೆ ತೀರಾ ಹಿಂದೆ ಬಿದ್ದಿದೆ.

1998ರಿಂದ ಸತತವಾಗಿ 15 ವರ್ಷಗಳ ಕಾಲ ದೆಹಲಿಯಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಈ ಬಾರಿ ಚುನಾವಣಾ ಪ್ರಚಾರ ನಡೆಸದೆ ಬಿಜೆಪಿ ಹಾಗೂ ಆಮ್ ಆದ್ಮಿಪಕ್ಷಗಳ ಅಬ್ಬರದಪ್ರಚಾರದ ನಡುವೆ ಕಾಣೆಯಾಗಿದೆ. ಬಿಜೆಪಿ ತನ್ನ ಸ್ಟಾರ್ ಪ್ರಚಾರಕರನ್ನು ಕರೆಸಿ ಹಲವು ಸಮಾವೇಶಗಳನ್ನು ನಡೆಸಿದೆ. ಅಮ್ ಆದ್ಮಿ ಕೂಡ ಹಲವು ರೋಡ್ ಶೋಗಳನ್ನು ನಡೆಸಿದೆ.

ಆದರೆ, ಕಾಂಗ್ರೆಸ್‌ನಿಂದ ಯಾವುದೇ ಸ್ಟಾರ್ ಪ್ರಚಾರಕರಿಲ್ಲದೆ ಚುನಾವಣಾ ಪ್ರಚಾರದಲ್ಲಿ ಹಿಂದೆ ಬಿದ್ದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ ಕಾರಣ ಹುಡುಕಿದಾಗ ಪಕ್ಷದ ಸಂಯೋಜಕರು ಹಾಗೂ ಸ್ಟಾರ್ ಪ್ರಚಾರಕರ ನಡುವೆ ಹೊಂದಾಣಿಕೆ ಇಲ್ಲದಿರುವುದು ಪ್ರಮುಖ ಕಾರಣ ಎನ್ನಲಾಗಿದೆ.

ದೆಹಲಿಯ ಕಾಂಗ್ರೆಸ್ ಅಭ್ಯರ್ಥಿಗಳು ಸ್ಟಾರ್ ಪ್ರಚಾರಕರನ್ನು ಕಳುಹಿಸಿ ಎಂದು ಪದೇ ಪದೇ ಹೈಕಮಾಂಡ್ ಬಳಿ ಒತ್ತಾಯಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್, ಜ್ಯೋತಿರಾದಿತ್ಯ ಸಿಂಧ್ಯಾ, ನವಜೋತ್ ಸಿಂಗ್ ಸಿಧು, ಸಚಿನ ಪೈಲಟ್ ಇದ್ದಾರೆ. ಇವರೆಲ್ಲರೂ ಪ್ರಚಾರಕ್ಕಾಗಿ ಸಮಯ ಹೊಂದಾಣಿಕೆ ಮಾಡಿಕೊಳ್ಳುವುದೇ ಸಮಸ್ಯೆಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:ಸಿಎಎ ವಿರುದ್ಧ ಮಾತನಾಡುವವರು ಓಡಿಹೋಗುವ ರೀತಿ ಬಿಜೆಪಿ ಗೆಲ್ಲಿಸಿ: ಅಮಿತ್ ಶಾ

ರಾಹುಲ್ ಗಾಂಧಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ ಎಂದುಕೊಂಡಿದ್ದರೂ ಇದುವರೆಗೂ ಆಗಮಿಸಿಲ್ಲ. ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕಿಂದ ಆಮ್ ಆದ್ಮಿಪಕ್ಷ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ಇದ್ದು, ಬಿಜೆಪಿಗೆಪೈಪೋಟಿ ನೀಡುತ್ತಿದೆ. ಆದರೆ, ಅಲ್ಪಸಂಖ್ಯಾತ ಓಟ್ ಬ್ಯಾಂಕ್ ಇರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಮತ ಪಡೆಯಬಹುದು. ಆದರೆ, ಗೆಲುವು ಸಾಧಿಸುವಷ್ಟು ಮತಗಳು ಬರಲಾರವು ಎಂದು ರಾಜಕೀಯ ವಿಶ್ಲೇಷಕರು ವಿವರಿಸುತ್ತಾರೆ.

ದೆಹಲಿಯ ಗಾಂಧಿನಗರ, ಬದ್ಲಿ, ಸೀಲಾಂಪುರ್, ಮುಸ್ತಫಾಬಾದ್ ಮತ್ತು ಬಲ್ಲಿಮರನ್ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆಮ್ ಆದ್ಮಿಪಕ್ಷದ ಅಭ್ಯರ್ಥಿಗಳ ನಡುವೆ ಪೈಪೋಟಿ ಇದೆ. ಕಾಂಗ್ರೆಸ್ ಹಾಗೂ ಆಮ್ ಆದ್ಮಿಪಕ್ಷಗಳಪೈಪೋಟಿ ನಡುವೆ ಬಿಜೆಪಿ ಲಾಭ ಪಡೆಯುವ ಎಲ್ಲಾ ಸೂಚನೆಗಳಿವೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.